ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಕುರ್ಮಾಣಿ ವಿಠಲ ಗೌಡರ ಪತ್ನಿ ಶಶಿಕಲಾ(51ವ)ರವರು ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ನಡೆದಿದೆ.
ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಮೃತರು ಪುತ್ರ ರಂಜಿತ್ ಹಾಗೂ ಪುತ್ರಿ ರಕ್ಷಾ ರವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.