ಇಂದಬೆಟ್ಟು : 2024-2025 ನೇ ಸಾಲಿನ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆಯು ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ.24 ರಂದು ನಡೆಯಿತು.
ಗ್ರಾಮಸಭೆಯಲ್ಲಿ ಆರ್ಥಿಕ ಸಾಕ್ಷರತಾ ಕೇಂದ್ರದ ಉಷಾ ಕಾಮತ್ ರವರು ಮಾಹಿತಿಯನ್ನು ನೀಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿ, ದೇವನಾರಿ ಹಾಗೂ ಕಲ್ಲಾಜೆ ಶಾಲಾ ಮಕ್ಕಳು ಉಪಸ್ಥಿತರಿದ್ದು ಗ್ರಾಮ ಸಭೆಯನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಆನಂದ ಅಡಿಲು, ಶ್ರೀಕಾಂತ್ ಎಸ್ ಇಂದಬೆಟ್ಟು, ಶ್ರೀಮತಿ ಹರಿಣಾಕ್ಷಿ, ವೀರಪ್ಪ ಮೊಯ್ಲಿ, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಗ್ರಾಮ ಸಭೆಯನ್ನು ಯಶಸ್ವಿಗೊಳಿಸಿದರು.
ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಸ್ವಾಗತಿಸಿ, ವಂದಿಸಿದರು.