ಶಿಶಿಲ : ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಇದರ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆಯು ಜ. 24ರಂದು ಜರುಗಿತು.
ಘಟಕವನ್ನು ಶಿಶಿಲ ಗ್ರಾಪಂ ಅಧ್ಯಕ್ಷ ಸುಧಿನ್ ಡಿ. ನೆರವೇರಿಸಿದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಹರೀಶ್ ಕೆ. ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು. ರಮೇಶ್ ಬೈರಕಟ್ಟ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.