ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೋವರ್ಸ್ ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಗಣರಾಜ್ಯ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರು ಧ್ವಜಾರೋಹಣವನ್ನು ನೆರವೇರಿಸಿ ಭಾರತ ಗಣತಂತ್ರವಾದ ವಿಶೇಷತೆಯನ್ನು ಸವಿವರವಾಗಿ ತಿಳಿಸಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಧಾಕೃಷ್ಣ ಹೆಚ್ ಬಿ, ಕಾರ್ಯಕ್ರಮ ನಿರ್ವಹಿಸಿದರು. ತದನಂತರ ರಾಷ್ಟ್ರೀಯ ಸೇವಾ ಯೋಜನೆಯ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು.