ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ರವರು ನೆರವೇರಿಸಿದರು. ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ S.ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ.ಇಂತಿಯಾಜ್ ಹಾಗೂ ಪಂಚಾಯಿತಿನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಮ್ಮ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಅಡುಗೆಯವರು ಮಕ್ಕಳು ಹಾಜರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ಉಮಾ .ಯನ್ ಎಲ್ಲರನ್ನು ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಲೀಂ ರವರು ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು. ಮಕ್ಕಳಿಂದ ಪಥ ಸಂಚಲನ ನಡೆಯಿತು. ಶಿಕ್ಷಕಿ ವೇರೋನಿಕಾ ಎ ಧನ್ಯವಾದವಿತ್ತರು.