September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಯುವ ಮುಂದಾಳು ಹಾಗೂ ಸಾಮಾಜಿಕ ಕಾರ್‍ಯಕರ್ತ ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಆಗಮಿಸಿ ಗೌರವ ರಕ್ಷೆಯನ್ನು ಸ್ವೀಕರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕ ರೆ. ಫಾ. ಅಬೆಲ್ ಲೋಬೊ ಮಾತನಾಡಿ ಪ್ರಜಾಪ್ರಭುತ್ವ ನಮ್ಮ ದೇಶದ ಸಂವಿಧಾನದಲ್ಲಿ ಅಡಕವಾಗಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ನಮ್ಮನ್ನು ಜಾಗೃತಗೊಳಿಸುವುದೆಂದು ತಿಳಿಸುತ್ತಾ ಸೌಹಾರ್ಧಯುತವಾಗಿ ಏಕತೆಯಿಂದ ಬಾಳಿ ಬದುಕಬೇಕೆಂಬ ಸಂದೇಶ ನೀಡಿದರು

ವೇದಿಕೆಯಲ್ಲಿ ಪ್ರಾಂಶುಪಾಲ ಫಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್, ಕಾರ್ಯದರ್ಶಿ ಲಿಗೋರಿ ವಾಸ್, ಸ್ಥಳೀಯ ಪಂಚಾಯತ್ ಸದಸ್ಯರಾದ ಅನಿಲ್ ಡಿಸೋಜಾ ಹಾಗೂ ಜಾನೆಟ್ ರೊಡ್ರಿಗಸ್, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ಸಾಮೂಹಿಕ ಕವಾಯತು ನಡೆಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ನೃತ್ಯ ಹಾಗೂ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು. ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಜಾಪ್ರಭುತ್ವ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು.

ಕಾರ್ಯಕ್ರಮವನ್ನು ಶಿಕ್ಷಕಿ ಸಿ. ಸಿರಿಶಾ ಹಾಗೂ ಮಿಶಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾರಿಗುಡಿ ಬಳಿ ದುರ್ನಾತ ಬೀರುವ ಒಳ ಚರಂಡಿ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!