25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

ಬಂದಾರು: ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.೨೬ರಂದು ನಡೆಯಿತು.

ಬ್ರಹ್ಮಕಲಶೋತ್ಸವ ಯಶಸ್ಸಿಗೆ ಕಾರಣಿಭೂತರಾದ ವಿವಿಧ ಸಮಿತಿಗಳಿಗೆ, ದಾನಿಗಳಿಗೆ, ಭಕ್ತವೃಂದಕ್ಕೆ ಅಭಿನಂದನೆ ಸಲ್ಲಿಸಿ ಯುವ ಉದ್ಯಮಿ ಕಿರಣ್‌ಚಂದ್ರ ಡಿ ಪುಷ್ಪಗಿರಿಯವರು ಶುಭನುಡಿ ಸಲ್ಲಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಕೃಷಿ ವಿಭಾಗ ಮುಖ್ಯಸ್ಥ ಬಜೆಗುತ್ತು ಬಾಲಕೃಷ್ಣ ಪೂಜಾರಿ ಯವರು ಅಭಿನಂದನಾ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್‌ಡಿಎಂ ಕಾಲೇಜು ಉಪನ್ಯಾಸಕ ಡಾ. ದಿವಾ ಕೊಕ್ಕಡ ಸಂದರ್ಭಯೋಚಿತವಾಗಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ವಿಭಾಗ ಯೋಜನಾಧಿಕಾರಿ ಸುರೇಂದ್ರ, ಅನುವಂಶೀಯ ಆಡಳಿತ ಮೊಕ್ತೇಸರ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಳದ ಅರ್ಚಕರಾದ ಅನಂತರಾಮ ಶಬರಾಯ, ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು ಉಪಸ್ಥಿತರಿದ್ದರು.

ದೇವಳಕ್ಕೆ ವಸ್ತು ರೂಪದಲ್ಲಿ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು. ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತವೃಂದವರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!