ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಬಾಯಿ ಮತ್ತು ಹಲ್ಲಿನ ಆರೋಗ್ಯದ ಮುಂಜಾಗ್ರತಾ ಕ್ರಮದ ಕುರಿತು ಹಾಗೂ ಸಾಮಾಜಿಕ ಜಾಲತಾಣದ ಸಾಧಕ ಬಾಧಕಗಳ ಕುರಿತು ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಉಜಿರೆಯ ದಂತ ವೈದ್ಯೆ ಡಾ| ದೀಪಾಲಿ ಎಸ್. ಡೊಂಗ್ರೆ ನೆರವೇರಿಸಿ, ಹಲವಾರು ಉದಾಹರಣೆ, ಕಥೆ ಹಾಸ್ಯ, ರಸಪ್ರಶ್ನೆ ಹಾಗೂ ಸಂವಾದದ ಮುಖಾಂತರ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಸ್ವಾಗತಿಸಿ, ವಿದ್ಯಾರ್ಥಿಗಳಾದ ಕು. ಸಿಂಧೂರ ಕಾರ್ಯಕ್ರಮನಿರೂಪಿಸಿ, ಕು. ಮಾಧುರ್ಯ ಧನ್ಯವಾದವಿತ್ತರು.