25.8 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

ಬಂದಾರು: ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.26ರಂದು ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಶ್ರೀ ಕ್ಷೇತ್ರದಿಂದ ರೂ ೨ಲಕ್ಷ ಸಹಾಯಧನ ಚೆಕ್ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ರವರು ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿದಿ ಪ್ರಮೀಳಾ, ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಅನಿತಾ ಕುರುಡಂಗೆ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಬಜಗುತ್ತು, ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ ಗೌಡ ಅಡ್ಡಾರು, ಅನುವಂಶೀಯ ಆಡಳಿತ ಮೊಕ್ತೇಸರ ಕುಕ್ಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಳದ ಅರ್ಚಕ ಅನಂತರಾಮ ಶಬರಾಯ, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು ಉಪಸ್ಥಿರಿದ್ದರು.

Related posts

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya
error: Content is protected !!