ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.
ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.
ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಕು. ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.