22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ರಾಷ್ಟ್ರೀಯ ಹಬ್ಬಗಳನ್ನು ಅತ್ಯಂತ ಸಂಭ್ರಮದಿಂದ ನಾವು ಆಚರಿಸಬೇಕು. ಭಾರತದ ಇತಿಹಾಸ ,ಭಾರತದ ಪರಂಪರೆ, ಸ್ವರಾಜ್ಯದ ಮಹತ್ವ, ಒಗ್ಗಟ್ಟಿನ ಬಲ, ವಿದ್ಯಾರ್ಥಿಗಳ ಕರ್ತವ್ಯ ಹಾಗೂ ತನ್ನ ಗುಣದಲ್ಲಿ ಮಾಡಬೇಕಾದ ಉತ್ತಮ ಮಾರ್ಪಾಡುಗಳನ್ನು, ಸಂವಿಧಾನದ ರಚನೆ ಹಾಗೂ ಮಹತ್ವ ಜೊತೆಗೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಾದ ಉತ್ತಮ ಹವ್ಯಾಸ ಇತ್ಯಾದಿಗಳನ್ನು ಹಲವು ಉದಾಹರಣೆ ಹಾಗೂ ಕಥೆಗಳ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಸಿ, ಸ್ವಾಗತಿಸಿದರು.

ಬಳಿಕ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳ ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಕು. ಪೂರ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಕು. ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಕು. ಧನ್ಯಶ್ರಿ ವಂದಿಸಿದರು.

Related posts

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya
error: Content is protected !!