ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಉಜಿರೆಯ ಹಾಗೂ ಧರ್ಮಸ್ಥಳದ ಎಸ್. ಡಿ. ಎಂ. ಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡುವ “ಅನುಭವವನ್ನು ಅನುಭವಿಸಿ” ಎಂಬ ವಿನೂತನ ಕಾರ್ಯಕ್ರಮವನ್ನು ಜ.27 ಮತ್ತು 28 ರಂದು ಹಮ್ಮಿಕೊಳ್ಳಲಾಗಿತ್ತು.

ಎರಡು ದಿನದ ಈ ವಿನೂತನ ಕಾರ್ಯಕ್ರಮದಲ್ಲಿ ಒಟ್ಟು 6 ಶಾಲೆಯ 480 ಕ್ಕೂ ಅಧಿಕ ವಿದ್ಯಾರ್ಥಿಗಳು ಭೌತ ಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರದ ಪ್ರಯೋಗಾಲಯಗಳಿಗೆ ಭೇಟಿ ನೀಡಿ ತಾವು ಕಲಿಯುತ್ತಿರುವ ವಿಜ್ಞಾನದ ಸಿದ್ಧಾಂತ ಮತ್ತು ನಿಯಮಗಳನ್ನು ಪ್ರಾಯೋಗಿಕವಾಗಿ ನೋಡಿ ಅನುಭವಿಸಿ ವಿಷಯಗಳನ್ನು ಇನ್ನೂ ಹೆಚ್ಚಾಗಿ ಮನದಟ್ಟು ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ, ವಿಜ್ಞಾನ ವಿದ್ಯಾರ್ಥಿಗಳು ಕೇವಲ ಅಂಕಗಳನ್ನೇ ಮಾನದಂಡವಾಗಿಸಿ ಅರ್ಥವಿಲ್ಲದೇ ಓದುತ್ತಿರುವುದು ಆಘಾತಕಾರಿ ಬೆಳವಣಿಗೆ, ಓದುವ ವಿಷಯವನ್ನು ಪ್ರಾಯೋಗಿಕವಾಗಿ ನೋಡಿದಾಗ ಮತ್ತು ಅನುಭವಿಸಿದಾಗ ಮಾತ್ರ ಆ ವಿಷಯ ಬಹಳ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಈ ಒಂದು ವಿನೂತನ ಪ್ರಯೋಗವನ್ನು ಕಳೆದ ಕೆಲವು ವರ್ಷಗಳಿಂದ ಮಾಡುತ್ತಿದ್ದೇವೆ ಇದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಕರೆ ನೀಡಿ ವಿದ್ಯಾರ್ಥಿಗಳ ಹತ್ತನೇ ತರಗತಿಯ ನಂತರದ ಭವಿಷ್ಯಕ್ಕೆ ಶುಭ ಹಾರೈಸಿದರು.


ವಿಜ್ಞಾನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಯೋಗಗಳನ್ನು ವಿವರಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಡಾ. ರಾಜೇಶ್ವರಿ ಕೆ ಆರ್ ಮತ್ತು ಭೌತಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya
error: Content is protected !!