37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

ಬೆಳ್ತಂಗಡಿ : ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ 30ನೇ ವರ್ಷದ ರಾಜ್ಯಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ (ಪುಷ್ಪ ೫೩ ಮತ್ತು ೫೪) ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭವು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಜ. 28 ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಪುರಸ್ಕಾರ ಹಾಗೂ ಶುಭಾಶೀರ್ವಾದ ನೀಡಿದರು.

ಗೀತೆ ರಚನೆಕಾರ, ಸಂಗೀತ ನಿರ್ದೇಶಕ, ನಟ ಬೆಂಗಳೂರಿನ ವಿ. ಮನೋಹರ್ ಶುಭಾಶಂಸನೆ ಮಾಡಿದರು.

ವೇದಿಕೆಯಲ್ಲಿ ಶಾಂತಿವನದ ಟ್ರಸ್ಟಿಗಳಾದ ಡಾ. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಕಾರ್ಯದರ್ಶಿ ಸೀತಾರಾಮ ತೋಳ್ಳಾಡಿತ್ತಾಯ ಉಪಸ್ಥಿತರಿದ್ದರು.

ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಾದ ಅಮಿತ್ ಎಸ್‌.ಡಿ.ಎಂ,ಭೂಮಿಕಾ ರಾವ್ ಪಡುಬಿದ್ರೆ, ಪ್ರಣತಿ ರಾವ್ ಉಡುಪಿ ಇವರು ಭಾಷಣ, ಶ್ಲೋಕ ಕಂಠಪಾಠ, ಶ್ಲೋಕವನ್ನು ಸಭೆಯ ಮುಂದಿಟ್ಟರು.

ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ| ಐ. ಶಶಿಕಾಂತ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಳಾಡಿತ್ತಾಯ ವಂದಿಸಿದರು. ಶಿಕ್ಷಕ ರಾಘವೇಂದ್ರ ರಾವ್ ಪಡುಬಿದ್ರೆ ಕಾರ್ಯಕ್ರಮ ನಿರ್ವಹಿಸಿದರು. ಯೋಗ ಸಂಘಟಕ ಅಶೋಕ ಪೂಜಾರಿ ಸಹಕರಿಸಿದರು.
ವಿದ್ಯಾರ್ಥಿನಿ ಸಿಂಚನಾ ಎಸ್ ಆಚಾರಿ ಪ್ರಾರ್ಥನೆ ಹಾಡಿದರು.

Related posts

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya
error: Content is protected !!