April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

ಇಂದಬೆಟ್ಟು: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಶಿಬಿರವನ್ನು ಇಂದಬೆಟ್ಟಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್ ಸಭಾಂಗಣದಲ್ಲಿ ತಾಲೂಕು ಸಮಿತಿಯ ಅಧ್ಯಕ್ಷ ಬಿ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು.

ಇಂದಬೆಟ್ಟು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಆಶಾಲತರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸದಸ್ಯ ಕಾರ್ಯದರ್ಶಿಯಾದ ಭವಾನಿಶಂಕರ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಉದ್ದೇಶ ಹಾಗೂ ಯೋಜನೆಯ ಮಾಹಿತಿಯನ್ನು ವಿವರಿಸಿದರು.

ಇಂದಬೆಟ್ಟು ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ನ ಧರ್ಮಗುರುಗಳಾದ ಫಾ| ಸ್ಟ್ಯಾನಿ ಮೊಂತೇರೋ ಶುಭಾಸಂಶನೆ ನೀಡಿದರು.

ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೇಡಿ, ತಾಲೂಕು ಗ್ರಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಸದಸ್ಯರಾದ ಶ್ರೀಮತಿ ವಂದನಾ ಕುಮಾರಿ, ಕೆ ನೇಮಿರಾಜ್ ಕಿಲ್ಲೂರು, ಹಕೀಂ ಕೊಕ್ಕಡ, ಶ್ರೀಮತಿ ಸೌಮ್ಯ, ವೀರಪ್ಪ ಮೊಯ್ಲಿ, ವಾಸುದೇವ್ ರಾವ್, ಸತೀಶ್ ಹೆಗ್ಡೆ, ಅಬ್ದುಲ್ ಸಲಾಂ, ಶ್ರೀಮತಿ ಮೆರಿಟಾ ಪಿಂಟೋ, ಶ್ರೀಪತಿ ಉಪಾಧ್ಯಾಯ, ಕೇಶವ ನಾಯ್ಕ, ಶರೀಫ್, ಮಲವಂತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಜೈನ್, ನಡ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳ, ನಾವೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಸುನಂದ ಸಿಡಿಪಿಒ ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಎಇಇ, ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಅರುಣ್ ಕುಮಾರ್, ಆಹಾರ ಇಲಾಖೆಯ ಶಿರಸ್ತೆದಾರ್ ವಿಶ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂದಬೆಟ್ಟು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಸ್ವಾಗತಿಸಿ, ನಾವೂರು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಧನ್ಯವಾದ ಸಲ್ಲಿಸಿದರು. ಮಿತ್ತಬಾಗಿಲು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!