23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ನಡೆದ ಶತಮಾನೋತ್ತರ ವಿoಶತಿ (120ವರ್ಷ ) ಎಲ್.ಕೆ‌.ಜಿ ಕಟ್ಟಡದ ಸಹಾಯಾರ್ಥ ಪ್ರಯುಕ್ತ ಬಾಲವನ ಮತ್ತು ಪೀಠೋಪಕರಣಗಳ ಉದ್ಘಾಟನೆ ಹಾಗೂ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಸರ್ಕಾರದ್ದು ಮಾತ್ರವಲ್ಲ, ನಮ್ಮೆಲ್ಲರ ಜವಾಬ್ದಾರಿ ಕೂಡ ಹೌದು. ಇಂದು ಸರಕಾರಿ ಶಾಲೆಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಎಸ್.ಡಿ.ಎಮ್.ಸಿ ಸದಸ್ಯರು, ಊರ ದಾನಿಗಳು, ಹಳೆಯ ವಿದ್ಯಾರ್ಥಿಗಳ ಸಹಕಾರ ಮುಖ್ಯವಾಗಿದೆ ಎಂದು ಪ್ರಶಂಸನೀಯ ಮಾತುಗಳನ್ನಾಡಿ, ಶಾಲೆಗೆ ಸರಕಾರದ ವತಿಯಿಂದ ಸುಸಜ್ಜಿತ ಶೌಚಾಲಯದ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮಾತನಾಡಿ ಕನ್ನಡ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಹಾಜಿ ಅಬ್ದುಲ್ ಲತೀಫ್, ಸಲೀಂ ಗುರುವಾಯನಕೆರೆ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್, ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ,ಹೇಮಂತ್ ಯರ್ಡೂರು, ರಾಮಕೃಷ್ಣ ನಾಯಕ್, ಪ್ರವೀಣ್ ಗುರುವಾಯನಕೆರೆ, ಸಿ‌.ಆರ್.ಪಿ ರಾಜೇಶ್ ಆಚಾರ್ಯ, ಮುಸ್ತಾಫ, ಮುಖ್ಯ ಶಿಕ್ಷಕಿ ಉಮಸ ಯನ್, ವೇರೋನಿಕಾ, ಹಾಗೂ ಅಧ್ಯಾಪಕ ವೃಂದದವರು, ಮೊದಲಾದವರು ಉಪಸ್ಥಿತರಿದ್ದರು.

ಗುರುವಾಯನಕೆರೆ, ಶಕ್ತಿನಗರ, ಕೊಜಪ್ಪಾಡಿ ಅಂಗನವಾಡಿ ಕೇಂದ್ರದ ಪುಟಾಣಿಗಳು ಮತ್ತು ಎಲ್ ಕೆ ಜಿ, ಯು ಕೆ ಜಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು‌. ನಿರೂಪಣೆಯನ್ನು ಪುಣ್ಯಶ್ರೀ ಕೋಟ್ಯಾನ್ ಪುಂಜಾಲಕಟ್ಟೆ, ನೆರವೇರಿಸಿದರು.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!