September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

ಬೆಳ್ತಂಗಡಿ : ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ 30ನೇ ವರ್ಷದ ರಾಜ್ಯಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ (ಪುಷ್ಪ ೫೩ ಮತ್ತು ೫೪) ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ಪುರಸ್ಕಾರ ಸಮಾರಂಭವು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಜ. 28 ರಂದು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಪುರಸ್ಕಾರ ಹಾಗೂ ಶುಭಾಶೀರ್ವಾದ ನೀಡಿದರು.

ಗೀತೆ ರಚನೆಕಾರ, ಸಂಗೀತ ನಿರ್ದೇಶಕ, ನಟ ಬೆಂಗಳೂರಿನ ವಿ. ಮನೋಹರ್ ಶುಭಾಶಂಸನೆ ಮಾಡಿದರು.

ವೇದಿಕೆಯಲ್ಲಿ ಶಾಂತಿವನದ ಟ್ರಸ್ಟಿಗಳಾದ ಡಾ. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಕಾರ್ಯದರ್ಶಿ ಸೀತಾರಾಮ ತೋಳ್ಳಾಡಿತ್ತಾಯ ಉಪಸ್ಥಿತರಿದ್ದರು.

ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಾದ ಅಮಿತ್ ಎಸ್‌.ಡಿ.ಎಂ,ಭೂಮಿಕಾ ರಾವ್ ಪಡುಬಿದ್ರೆ, ಪ್ರಣತಿ ರಾವ್ ಉಡುಪಿ ಇವರು ಭಾಷಣ, ಶ್ಲೋಕ ಕಂಠಪಾಠ, ಶ್ಲೋಕವನ್ನು ಸಭೆಯ ಮುಂದಿಟ್ಟರು.

ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ| ಐ. ಶಶಿಕಾಂತ ಜೈನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು.ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಳಾಡಿತ್ತಾಯ ವಂದಿಸಿದರು. ಶಿಕ್ಷಕ ರಾಘವೇಂದ್ರ ರಾವ್ ಪಡುಬಿದ್ರೆ ಕಾರ್ಯಕ್ರಮ ನಿರ್ವಹಿಸಿದರು. ಯೋಗ ಸಂಘಟಕ ಅಶೋಕ ಪೂಜಾರಿ ಸಹಕರಿಸಿದರು.
ವಿದ್ಯಾರ್ಥಿನಿ ಸಿಂಚನಾ ಎಸ್ ಆಚಾರಿ ಪ್ರಾರ್ಥನೆ ಹಾಡಿದರು.

Related posts

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಬಂದಾರು: ಚಂದ್ರಶೇಖರ್ ನಾಯಕ್ ರವರ ತೋಟಕ್ಕೆ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya
error: Content is protected !!