25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್1 ರಿಂದ ಮಾರ್ಚ್ 5 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವ ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಲೋಚನಾ ಸಭೆಯನ್ನು ಜ. 28 ರಂದು ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು.

ಸಮಾಲೋಚನ ಸಭೆಯ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಜಯ ವಿಕ್ರಂ ಕಲ್ಲಾಪು ವಹಿಸಿದ್ದರು. ಶ್ರೀ ಕ್ಷೇತ್ರ ಗೆಜ್ಜಗಿರಿಯ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಂಬಿಯವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಜಾತ್ರೋತ್ಸವದ ಮಾಹಿತಿಯನ್ನು ನೀಡಿದರು.

ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆಯವರು ಅಂದಿನಿಂದ ಇಂದಿನವರೆಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಡೆದು ಬಂದ ಹಾದಿಯನ್ನು ತಮ್ಮ ಪ್ರಾಸ್ತಾವಿಕ ಮಾತಿನಲ್ಲಿ ತಿಳಿಸಿದರು . ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಜಾತ್ರೋತ್ಸವ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಪ್ರಮಲ್ ಕುಮಾರ್ ರವರು ಮಾ.2 ರಂದು ಶ್ರೀ ಕ್ಷೇತ್ರದಲ್ಲಿ ಮಾತೆ ದೇಯಿ ಬೈದೆದಿಯ ಸನ್ನಿಧಿಯಲ್ಲಿ ನಡೆಯುವ ಮಡಿಲು ಸೇವೆಯ ಮಾಹಿತಿಯನ್ನು ಸಭೆಗೆ ಸವಿವರವಾಗಿ ತಿಳಿಸಿದರು .

ವೇದಿಕೆಯಲ್ಲಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡಾ l ರಾಜಾರಾಮ್ , ಮಹಿಳಾ ಸಂಚಾಲಕಿ ವಿದ್ಯಾ ರಾಕೇಶ್ , ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ರಾಜಶ್ರೀ ರಮಣ ,ಬೆಳ್ತಂಗಡಿ ಮಹಿಳಾ ಬಿಲ್ಲಾ ವೇದಿಕೆಯ ಅಧ್ಯಕ್ಷರಾದ ಸುಮತಿ ಪ್ರಮೋದ್, ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿಯ ಉಪಾಧ್ಯಕ್ಷ ಸುಂದರ ಪೂಜಾರಿ, ಕ್ಷೇತ್ರದ ಟ್ರಸ್ಟಿ ನಾರಾಯಣ ಪೂಜಾರಿ ಮಚ್ಚಿನ, ಶ್ರೀ ಕ್ಷೇತ್ರ ಗೆಜ್ಜಗಿರಿಯ ಮಾದ್ಯಮ ವಕ್ತಾರರಾದ ರಾಜೇಂದ್ರ ಚಿಲಿಂಬಿ, ಬೆಳ್ತಂಗಡಿ ಯುವ ಬಿಲ್ಲ ವೇದಿಕೆಯ ಅಧ್ಯಕ್ಷ ಪ್ರಸಾದ್ ಎಮ್ ಕೆ ಶಿರ್ಲಾಲು ಉಪಸ್ಥಿತರಿದ್ದರು.

ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ ಸ್ವಾಗತಿಸಿ, ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಕೋಟ್ಯಾನ್ ಕುಕ್ಕೆಡಿಯವರ ಧನ್ಯವಾದವಿತ್ತರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿಯ ವಕ್ತಾರರಾದ ಸಂದೀಪ್ ನಿರಲ್ಕೆಯವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಗುರುನಾರಾಯಣ ಸೇವಾಸಂಘದ ಮಾಜಿ ಅಧ್ಯಕ್ಷ ಜಯರಾಮ್ ಬಂಗೇರ, ಚಿದಾನಂದ ಪೂಜಾರಿ ಎಲ್ದಕ ಮಹಿಳಾಬಿಲ್ಲವ ವೇದಿಕೆಯ ನಿರ್ದೇಶಕರುಗಳು, ತಾಲೂಕಿನ ಗ್ರಾಮ ಸಮಿತಿಯ ಅಧ್ಯಕ್ಷರುಗಳು, ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರುಗಳು ಉಪಸ್ಥಿತರಿದ್ದರು.

ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಬೆಳ್ತಂಗಡಿ ತಾಲೂಕಿನ ಎಲ್ಲಾ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಂಚಾಲಕರುಗಳ ಪಟ್ಟಿಯನ್ನು ವಾಚಿಸಿದರು.

Related posts

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!