April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ತರಬೇತಿ ಪ್ರಾರಂಭವಾಗಿದ್ದು,ಮೊದಲ ಹಂತದಲ್ಲಿ ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರಿಗೆ ಮಾನ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್ ಇವರು ಸ್ವಚ್ಛತೆ ಕಾಪಾಡುವಲ್ಲಿ ನಾಗರೀಕರಾಗಿ ನಮ್ಮ ಪಾತ್ರ ಮುಖ್ಯ. ಒಣ ಕಸ ಸಂಗ್ರಹಿಸಿ ಎಮ್. ಆರ್. ಎಫ್ ಘಟಕ ತಲುಪಿಸುವ ಕಾರ್ಯ ಸತತವಾಗಿ ನಡೆಯಬೇಕು ಎಂದು ಗ್ರಾ. ಪಂ ಅಧ್ಯಕ್ಷರಿಗೆ, ಸದಸ್ಯರಿಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸಲಹೆ ಸೂಚನೆ ನೀಡಿದರು.

ಈ ಸಂದರ್ಭ ಘನ ತ್ಯಾಜ್ಯ ನಿರ್ವಹಣಾ ಸಮಾಲೋಚಕರಾದ ನವೀನ್ ಕೋಣಾಜೆ ಮತ್ತು ಪವನ್ ಎಮ್. ಆರ್. ಎಫ್ ಘಟಕ ಕಾರ್ಯ ನಿರ್ವಹಿಸುತ್ತಿರುವ ಕುರಿತಂತೆ ಮಾಹಿತಿ ನೀಡಿದರು.

ಈ ಸಂದರ್ಭ ಅಧಿಕಾರಿಗಳೊಂದಿಗೆ ತರಬೇತುದಾರರು ಘನ ತ್ಯಾಜ್ಯ ನಿರ್ವಹಣಾ ಘಟಕ, ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಾಯಿತು ಹಾಗೂ ವ್ಯೂಹಮ್ ಸಂಸ್ಥೆಯಡಿ ಬ್ಯಾಕ್ ಸೋಲ್ಡ್ಜರ್ ಫ್ಲೖ ಟೆಕ್ನೊಲಜಿಯಡಿ ಗೊಬ್ಬರ ತಯಾರಿಸುವ ಕುರಿತಂತೆ ಮಾಹಿತಿ ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಶಿಬಾಜೆ, ಅರಸಿನಮಕ್ಕಿ ಗ್ರಾಮಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ,ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಶಿಬಾಜೆ ಮತ್ತು ಅರಸಿನಮಕ್ಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಎನ್ ಆರ್. ಎಲ್. ಎಮ್ ವಲಯ ಮೇಲ್ವಿಚಾರಕರಾದ ಸ್ವಸ್ತಿಕ್ ಜೖನ್,ಎಮ್. ಆರ್. ಎಫ್ ಘಟಕದ ಸಿಬ್ಬಂದಿಗಳಾದ ಭರತ್, ರಮೇಶ್ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!