September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಅದೂರುಪೆರಲು ಶ್ರೀ ಪಂಚದುರ್ಗಾ ಸಭಾಭವನದಲ್ಲಿ ಜ. 26 ರಂದು ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಎ. ಧರ್ಣಪ್ಪ ಗೌಡ ಬಾನಡ್ಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಕೋರಿದರು.

ಬೆಂಗಳೂರಿನ ಯುವ ಉದ್ಯಮಿ ಪುಷ್ಪಗಿರಿ ಕಿರಣ್ ಚಂದ್ರ ಮಾತನಾಡಿ ಒಕ್ಕಲಿಗರಾದ ನಾವು ಇಂದು ಯಾವುದರಲ್ಲಿಯೂ ಹಿಂದೆ ಉಳಿದಿಲ್ಲ. ನಮ್ಮ ಸಮುದಾಯದ ಪ್ರತಿಯೊಂದು ಮಗುವು ಉನ್ನತ ಶಿಕ್ಷಣ ಪಡೆದು ದೇಶ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮವರು ಕೃಷಿಯೊಂದಿಗೆ ಇತರ ವ್ಯವಹಾರಗಳನ್ನು ಮಾಡಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕೆಂದು ಕರೆ ನೀಡಿದರು. ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ , ಸಂಘದ ಅಧ್ಯಕ್ಷ ವಿಜಯ ಕುಮಾರ್ ಎಂ. ಕೊಯ್ಯೂರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ನವೀನ್ ಗೌಡ ವಾದ್ಯಕೋಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಯಾಮಣಿ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ತಾಲೂಕು ಸಂಘದ ನಿರ್ದೇಶಕ ದಿನೇಶ್ ಗೌಡ ದೇಂತ್ಯಾರು ಬೊಟ್ಟು, ಕೊಯ್ಯೂರು ಗ್ರಾಮದ ಮಹಿಳಾ ವೇದಿಕೆ ಅಧ್ಯಕ್ಷೆ ವನಿತಾ ಕಡಮಾಜೆ, ಯುವ ವೇದಿಕೆ ಅಧ್ಯಕ್ಷ ಅಜಿತ್ ಗೌಡ ಬಜಿಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹರೀಶ್‌ ಗೌಡ ಬಜಿಲ ಉಪಸ್ಥಿತರಿದ್ದರು.

ಸಮಾರಂಭದ ಅತಿಥಿಗಳಾದ ಧರ್ಣಪ್ಪ ಗೌಡ ಬಾನಡ್ಕ, ಕಿರಣ್ ಚಂದ್ರ ಪುಷ್ಪಗಿರಿ, ಚಂದ್ರಕಾಂತ ನಿಡ್ಡಾಜೆ, ಜಯಣ್ಣ ಗೌಡ ಮಿನಂದೇಲು ಇವರುಗಳನ್ನು ಸನ್ಮಾನಿಸಲಾಯಿತು. 2024ನೇ ಸಾಲಿನಲ್ಲಿ 10ನೇ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 90% ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಇತ್ತೀಚೆಗೆ ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿ ರವೀಂದ್ರನಾಥ ಪೆರ್ಮುದೆ, ದಾಮೋದರ ಗೌಡ ಬೆರ್ಕೆ, ಉಜ್ವಲ್ ಕುಮಾರ್ ಪಾಂಬೇಲು, ಪರಮೇಶ್ವ‌ರ್ ಗೌಡ, ನವೀನ ಕುಮಾರ್ ವಾದ್ಯಕೋಡಿ, ಯತೀಶ್ ಗೌಡ, ಶೋಭಾ ಮೈಂದಕೋಡಿ, ಕುಸುಮಾವತಿ ಕಲ್ಲೇರಿ ಇವರುಗಳನ್ನು ಗೌರವಿಸಲಾಯಿತು.

ದೀಪಿಕಾ, ಭರತ್, ದಿನೇಶ್ ಜಾಲ್ನಪು, ಗೀತಾ ರಾಮಣ್ಣ ಗೌಡ, ಅಭಿನಂದನಾ ಪತ್ರ ಮತ್ತು ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಸಭಾ ಕಾರ್ಯಕ್ರಮದ ಮುಂಚಿತವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಮಾನ್ಯ, ಚೈತನ್ಯ, ಪ್ರೇಕ್ಷರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭಾ ಕಾರ್ಯಕ್ರಮದಲ್ಲಿ ರವೀಂದ್ರನಾಥ ಪೆರ್ಮುದೆ ಸ್ವಾಗತಿಸಿ, ಮೋಹನ್ ಗೌಡ ಮತ್ತು ದಿವ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು. ಯಶವಂತ ಗೌಡ ಪೂರ್ಯಳ ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!