April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

ಉಜಿರೆ: ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಡಾ. ಶಲೀಪ್ ಎ.ಪಿ. ಹೇಳಿದರು.

ಉಜಿರೆಯ ಎಸ್.ಡಿ.ಎಂ. ಬಿ.ಎಡ್. ಕಾಲೇಜು, ಎಸ್.ಡಿ.ಎಂ. ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳು ಜ. 28ರಂದು ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸ್ಪರ್ಧೆಯಲ್ಲಿ ಸೋಲು – ಗೆಲುವು ಸಾಮಾನ್ಯ. ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಒಂದೇ ರೀತಿಯಲ್ಲಿ ಎರಡನ್ನೂ ಸ್ವೀಕರಿಸಿ. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಸಂಸ್ಥೆ ಹಾಗೂ ಪೋಷಕರು ನೀಡುವ ಪ್ರೋತ್ಸಾಹಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೆಳೆಯಬೇಕು” ಎಂದು ಅವರು ಸಲಹೆ ನೀಡಿದರು.
ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಚ್. ಅವರು ಮಾತನಾಡಿ, ಆರಂಭದಿಂದಲೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯು ಕ್ರೀಡಾ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ ಜೊತೆಗೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕ್ರೀಡೆಗಳಲ್ಲಿ ಸಾಧನೆ ಮಾಡಲು ಅನುಕೂಲವಾಗಿದೆ ಎಂದರು.


ಎಸ್.ಡಿ.ಎಂ. ಬಿ.ಎಡ್. ಕಾಲೇಜು ಪ್ರಾಂಶುಪಾಲ ಸಂತೋಷ್ ಸಲ್ದಾನ ಸ್ವಾಗತಿಸಿದರು. ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಕಾಮತ್ ವಂದಿಸಿದರು. ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ್ ಕುಮಾರ್ ಕ್ರೀಡಾಕೂಟ ನಡೆಸಿಕೊಟ್ಟರು.

Related posts

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!