38.3 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

ಬೆಳ್ತಂಗಡಿ: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಜಿಲ್ಲಾ ಉಪಾಧ್ಯಕ್ಷ ಹಾಗೂ ತಾಲೂಕು ಅಧ್ಯಕ್ಷ ಪ್ರದೀಪ್ ಕುಮಾರ್ ಸಿ ಉಪ ತಹಶೀಲ್ದಾರರ ಮೂಲಕ ಜ.30 ರಂದು ಮನವಿ ಸಲ್ಲಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ರವರುಗಳ ಸರ್ಕಾರದ ಕಾನೂನು/ಸುತ್ತೋಲೆಗಳ ವಿರುದ್ದವಾದ ನಡವಳಿಕೆಗಳು ಹಾಗೂ ನಿಯಮಬಾಹಿರ ಆದೇಶಗಳು ಹಾಗೂ ನಡವಳಿಕೆಗಳ ಕಾರಣದಿಂದಾಗಿ ರಾಜ್ಯಾದ್ಯಂತ ಕಂದಾಯ ಇಲಾಖೆಯ ಆಧಾರ ಸ್ತಂಭವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರದ ಎಲ್ಲಾ ಜನಪರ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ಗೌರವಕ್ಕೆ ಧಕ್ಕೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ವಾತಂತ್ರ್ಯ ಪೂರ್ವದ ಬ್ರಿಟೀಷ್ ಆಳ್ವಿಕೆ ಮಾದರಿಯನ್ನು ಜೀವಂತವಾಗಿರಿಸಿ ದುರಾಡಳಿತ ನಡೆಸುತ್ತಿರುವ ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ರವರನ್ನು ಕೂಡಲೇ ಚಿಕ್ಕಮಗಳೂರು ಜಿಲ್ಲೆಯಿಂದ ವರ್ಗಾಯಿಸಿ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಗೆ ಜಿಲ್ಲಾಧಿಕಾರಿ/ಅಪರ ಜಿಲ್ಲಾಧಿಕಾರಿಯಾಗಿ ಸ್ಥಳನಿಯುಕ್ತಿಗೊಳಿಸದೇ ಸದರಿಯವರು ಮಾಡಿರುವ ಕಾನೂನು ಬಾಹಿರ ಮತ್ತು ಅಧೀನ ನೌಕರ ವಿರೋಧಿ ಆದೇಶಗಳನ್ನು ವಿಚಾರಣೆ ನಡೆಸಿ ಕಾನೂನು ರೀತ್ಯಾ ಕ್ರಮಗಳನ್ನು ಕೈಗೊಂಡು ಈ ವೃಂದದ 9000 ನೌಕರರಿಗೆ ನ್ಯಾಯ ಒದಗಿಸುವಂತೆ ಮನವಿಯಲ್ಲಿ ಕೋರಿದ್ದಾರೆ .ಆದೇಶಗಳ ವಿರುದ್ದವಾಗಿ ತೆಗೆದುಕೊಂಡಿರುವ ಕ್ರಮಗಳನ್ನು ರದ್ದುಪಡಿಸುವವರೆಗೆ ಹಾಗೂ ಇಬ್ಬರನ್ನು ವರ್ಗಾವಣೆ ಮಾಡದಿದ್ದಲ್ಲಿ ಫೆ.03 ರಿಂದ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬಗೆಯ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ. ತಾಲ್ಲೂಕು ಕಛೇರಿ/ ಜಿಲ್ಲಾಧಿಕಾರಿಗಳ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗುವುದು ಎಂದು ಮನವಿ ಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!