April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವವು ಜ.31ರಿಂದ ಫೆ.4ರವರೆಗೆ ವೇ.ಮೂ. ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ.


ಜ.31 ರಂದು ಬೆಳಿಗ್ಗೆ ಸ್ವಸ್ತಿ ಪುಣ್ಯಾಹ ವಾಚನ, ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ, ತೋರಣ ಮುಹೂರ್ತ ಗಣಪತಿ ಹವನ, ನವಕ ಕಲಶ, ಮಹಾಪೂಜೆ, ನಿತ್ಯ ಬಲಿ, ಧ್ವಜಾರೋಹಣ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ. ಸಂಜೆ ಶ್ರೀ ರಂಗಪೂಜೆ, ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ.


ಫೆ.1 ರಂದು ಬೆಳಗ್ಗೆ ಪುಣ್ಯಾಹ, ನಿತ್ಯನೈಮಿತ್ತಿಕಗಳು, ವೇ.ಮೂ. ಶಶಾಂಕ ಭಟ್ ಬಳಂಜ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ವಿಷ್ಣುಮೂರ್ತಿ ದೇವರ ಮಹಾಪೂಜೆ, ನಿತ್ಯ ಬಲಿ ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಸಂಜೆ ಶ್ರೀ ರಂಗಪೂಜೆ, ಬಲಿ. ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ಕ್ಷೇತ್ರದ ದೈವಗಳಾದ ಕೊಡಮಣಿತ್ತಾಯ, ಮೂಜಿಲ್ನಾಯ, ಕಲ್ಕುಡ-ಕಲ್ಲುರ್ಟಿ ನೇಮೋತ್ಸವ(ಕೋಲ)


ಫೆ.2ರಂದು ಬೆಳಗ್ಗೆ ಪುಣ್ಯಾಹ, ನಿತ್ಯ ನೈಮಿತ್ತಿಕಗಳು, ನಾಗದೇವರ ಸನ್ನಿಧಿಯಲ್ಲಿ ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ, ಆಶ್ಲೇಷಾ ಬಲಿ, ಮಧ್ಯಾಹ್ನ ಮಹಾಪೂಜೆ, ನಿತ್ಯ ಬಲಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ. ಸಂಜೆ ಶ್ರೀರಂಗ ಪೂಜೆ, ಬಲಿ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ರಾತ್ರಿ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.


ಫೆ.3ರಂದು ಪುಣ್ಯಾಹ, ನಿತ್ಯ ನೈಮಿತ್ತಿಕಗಳು, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಂಜೆ ಶ್ರೀ ರಂಗಪೂಜೆ, ಬಲಿ, ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಶ್ರೀ ಭೂತ ಬಲಿ, ಶಯನ ಪೂಜೆ, ಕವಾಟ ಬಂಧನ, ಅನ್ನಸಂತರ್ಪಣೆ.


ಫೆ.4ರಂದು ಕವಾಟೋದ್ಘಟನೆ, ಪುಣ್ಯಾಹ, ಪ್ರಸನ್ನ ಪೂಜೆ, ನಿತ್ಯ ನೈಮಿತ್ತಿಕಗಳು, ಚುರ್ಣೋತ್ಸವ, ಮಹಾಪೂಜೆ, ನಿತ್ಯ ಬಲಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ. ಸಂಜೆ ಸಾಮೂಹಿಕ ಶ್ರೀ ಮಹಾರಂಗ ಪೂಜೆ ಹಾಗೂ ನಿತ್ಯ ಪೂಜೆ, ಉತ್ಸವ ಬಲಿ, ವಸಂತ ಕಟ್ಟೆ ಪೂಜೆ, ಕಟ್ಟೆ ಪೂಜೆ ಸೇವೆ, ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಕೃಷ್ಣ ಸಂಪಿಗೆತ್ತಾಯ ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರೈ ಕಾರಂದೂರು ತಿಳಿಸಿದರು.

Related posts

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!