30.6 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.31-ಫೆ.1ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಹಾಗೂ ಪ್ರಧಾನ ಅರ್ಚಕ ದಿನೇಶ್ ಭಟ್ ಇವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

ಜ.31ರಂದು ಬೆಳಿಗ್ಗೆ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ಗಣಪತಿ ದೇವರಿಗೆ ನವಕೆ ಕೆಲಸ, ನಾಗ ದೇವರಿಗೆ ಕಲಶ ಪ್ರಸನ್ನ ಪೂಜೆ, ದೇವರಿಗೆ ಕಲಶಾಭಿಷೇಕ, ಪ್ರತಿಷ್ಠಾ ವಧಂತ್ಯುತ್ಸವ, ಇಂದಬೆಟ್ಟು, ನಾವೂರು, ನಡ, ಕನ್ಯಾಡಿ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ (ಕೈಕಂಬ ಪೇಟೆ ಬಳಿಯಿಂದ), ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಸಂಜೆ ದೇವರ ಉತ್ಸವ ಬಲಿ, ದೇವರಿಗೆ ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.


ಫೆ.1 ರಂದು ಬೆಳಿಗ್ಗೆ ಗಣಹೋಮ, ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಆಹ್ವಾನಿತ ಭಜನಾ ತಂಡಗಳಿಂದ ಕಮ್ಮಟ ಭಜನೋತ್ಸವ, ರಾತ್ರಿ ರಂಗಪೂಜೆ ನಡೆಯಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ.) ಇದರ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಶಾಸಕ ಕೆ. ಹರೀಶ್ ಕುಮಾರ್, ಉಜಿರೆ ಶ್ರೀ ಜನಾರ್ದನ ದೇವಸ್ಥಾದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಬೆನಕ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ನ ಡಾ| ಗೋಪಾಲಕೃಷ್ಣ ಭಟ್, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಡಾ| ಪ್ರದೀಪ್ ಭಾಗವಹಿಸಲಿದ್ದಾರೆ.


ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

Related posts

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!