30.6 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಫೆ.೨ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಬೆಳಗ್ಗೆ 108 ಕಾಯಿ ಗಣಹೋಮ, ಮೂಡಪ್ಪ ಸೇವೆ ಜರಗಲಿರುವುದು.


ಬೆಳಿಗ್ಗೆ 8.೦೦ ಕ್ಕೆ 108 ಕಾಯಿ ಗಣಹೋಮ ಮತ್ತು ಅಥರ್ವಶೀರ್ಷಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ, ರಾತ್ರಿ ೭.೦೦ ಕ್ಕೆ ಮೂಡಪ್ಪ ಸೇವೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಂತರ ಅನ್ನ ಸಂತರ್ಪಣೆ ಜರುಗಲಿದೆ.


ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ವಾಮನ್ ನಾಯಕ್ ಉಪ್ಪಿನಂಗಡಿ ರವರ ನೇತೃತ್ವದಲ್ಲಿ ಭಜನಾ ಸೇವೆ, ಸಾಯಂಕಾಲ 5-೦೦ಕ್ಕೆ ಮಂಗಳೂರು ಸುವರ್ಣ ನೃತ್ಯ ತಂಡ ಇವರು ಸೇವಾರ್ಥ “ಭರತನಾಟ್ಯ”, ಸೌತಡ್ಕ ಶಿಶು ಮಂದಿರ ಪುಟಾಣಿಗಳಿಂದ “ಚಿನ್ನರ ಚಿಲಿಪಿಲಿ”, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ “ತುಳುನಾಡ ಗಾನ ಗಂಧರ್ವ” ಬಿರುದಾಂಕಿತ ಶ್ರೀ ಜಗದೀಶ್ ಅಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ, ರಾತ್ರಿ 9.30ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರು ಮಂಜೇಶ್ವರ ಅಭಿನಯಿಸುವ ತುಳು ಪೌರಾಣಿಕ ಮತ್ತು ಭಕ್ತಿ ಪ್ರಧಾನ ಸಾಮಾಜಿಕ ನಾಟಕ “ಕಲ್ಜಿಗದ ಮಾಯ್ಕಾರೆ ಪಂಜುರ್ಲಿ” ನಡೆಯಲಿದೆ.

Related posts

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya
error: Content is protected !!