29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

ಉಜಿರೆ: ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಡಾ. ಶಲೀಪ್ ಎ.ಪಿ. ಹೇಳಿದರು.

ಉಜಿರೆಯ ಎಸ್.ಡಿ.ಎಂ. ಬಿ.ಎಡ್. ಕಾಲೇಜು, ಎಸ್.ಡಿ.ಎಂ. ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳು ಜ. 28ರಂದು ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಸ್ಪರ್ಧೆಯಲ್ಲಿ ಸೋಲು – ಗೆಲುವು ಸಾಮಾನ್ಯ. ಸೋತಾಗ ಕುಗ್ಗದೆ ಗೆದ್ದಾಗ ಹಿಗ್ಗದೆ ಒಂದೇ ರೀತಿಯಲ್ಲಿ ಎರಡನ್ನೂ ಸ್ವೀಕರಿಸಿ. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಸಂಸ್ಥೆ ಹಾಗೂ ಪೋಷಕರು ನೀಡುವ ಪ್ರೋತ್ಸಾಹಗಳನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬೆಳೆಯಬೇಕು” ಎಂದು ಅವರು ಸಲಹೆ ನೀಡಿದರು.
ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಎಚ್. ಅವರು ಮಾತನಾಡಿ, ಆರಂಭದಿಂದಲೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯು ಕ್ರೀಡಾ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ ಜೊತೆಗೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕ್ರೀಡೆಗಳಲ್ಲಿ ಸಾಧನೆ ಮಾಡಲು ಅನುಕೂಲವಾಗಿದೆ ಎಂದರು.


ಎಸ್.ಡಿ.ಎಂ. ಬಿ.ಎಡ್. ಕಾಲೇಜು ಪ್ರಾಂಶುಪಾಲ ಸಂತೋಷ್ ಸಲ್ದಾನ ಸ್ವಾಗತಿಸಿದರು. ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಕಾಮತ್ ವಂದಿಸಿದರು. ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಶಿಕ್ಷಣಾರ್ಥಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ್ ಕುಮಾರ್ ಕ್ರೀಡಾಕೂಟ ನಡೆಸಿಕೊಟ್ಟರು.

Related posts

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya
error: Content is protected !!