September 6, 2026
Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ರವರು ತಾಲೂಕಿನ ವಿವಿಧ ಕಾಮಗಾರಿಗಳಿಗೆ ಎರಡು ಕೋಟಿ ಹತ್ತು ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ರಕ್ಷಿತ್ ಶಿವರಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮಗಾರಿಯ ವಿವರಗಳು :
ತಾಲೂಕಿನ ಬಡಗಕಾರಂದೂರು ಗ್ರಾಮದ ಬೈಲ ಕೊಡಂಗೆ ಬಳಿ ತಡೆಗೋಡೆ ರಚನೆ ಕಾಮಗಾರಿಗೆ 30 ಲಕ್ಷ, ಕುಧ್ಯಾಡಿ ಗ್ರಾಮದ ಪದ್ಮಾಂಜಲಿ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ಗುತ್ತು ಮನೆಯ ಬಳಿ ತಡೆಗೋಡೆ ರಚನೆ 25 ಲಕ್ಷ , ಪುತ್ತಿಲ ಗ್ರಾಮದ ರವಿಪ್ರಭಾ ಮನೆಯ ಬಳಿ ತಡೆಗೋಡೆ ರಚನೆ ಕಾಮಗಾರಿ 25 ಲಕ್ಷ , ನಾರಾವಿ ಗ್ರಾಮದ ಸೂರ್ಯನಾರಾಯಣ ದೇವಸ್ಥಾನದ ಬಳಿ ತಡೆಗೋಡೆ ರಚನೆ 75 ಲಕ್ಷ , ನಡ ಪಂಚಾಯತ್ ವ್ಯಾಪ್ತಿಯ ಕನ್ಯಾಡಿ ಗ್ರಾಮದ ಮೂಡಬೆಟ್ಟು ಬಾಯ್ತರು ಬಳಿ ತಡೆಗೋಡೆ ರಚನೆ 30 ಲಕ್ಷ .

Related posts

ಅರಸಿನಮಕ್ಕಿ ಸೇವಾ ಟ್ರಸ್ಟ್ ವತಿಯಿಂದ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya
error: Content is protected !!