25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಜೈನ್ ರವರ ಅಧ್ಯಕ್ಷತೆಯಲ್ಲಿ ಜ.31 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೋಸೆಫ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ರೋಹಿಣಿ , ಕಾರ್ಯದರ್ಶಿ, ಪಂಚಾಯತ್‌ ಸದಸ್ಯರಾದ ಮಹಮ್ಮದ್ ಕೆ.ಯು., ಸುಂದರ ಪೂಜಾರಿ, ಶ್ರೀಮತಿ ಪವಿತ್ರ, ಶ್ರೀಮತಿ ಅರುಣ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಸ್ವಾಗತಿಸಿ, ಅನುಪಾಲನ ವರದಿಯನ್ನು ವಾಚಿಸಿದರು.

Related posts

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya
error: Content is protected !!