ಕೊಯ್ಯೂರು : ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 9ವರ್ಷ 3ತಿಂಗಳುಗಳ ಕಾಲ ಸಹಶಿಕ್ಷಕರಾಗಿ ಒಟ್ಟು 29 ವರ್ಷಗಳ ಕಾಲ ಶಿಕ್ಷಣ ಇಲಾಖೆಯಲ್ಲಿ ಸಹಶಿಕ್ಷಕಿಯಾಗಿ ಉತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ಜ.31ರಂದು ವೃತ್ತಿಯಿಂದ ನಿವೃತ್ತಿ ಹೊಂದಿದ ಶ್ರೀಮತಿ ರೆಜಿನಾ ಡಿಸಿಲ್ವ ಇವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ, ಪೋಷಕರು ಮತ್ತು ಶಾಲಾ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರವಾಗಿ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜ ಸೋಮಶೇಖರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳ್ತಂಗಡಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲಾ, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಡೀಕಯ್ಯ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನೋಣಯ್ಯ ಪೂಜಾರಿ, ಕಾರ್ಯದರ್ಶಿ ವಿನಾಯಕ ಬೆದ್ರಲ್ಕೆ, ಬೆಳ್ತಂಗಡಿ ಕ್ಲಸ್ಟರ್ ನ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಜಗನ್ನಾಥ, ಬಲಿರಾಮ ಲಮಾಣಿ, ಶ್ರೀಮತಿ ವಸಂತಿ, ಯೋಗೀಶ್ ಮತ್ತು ಶಾಲಾ ಸಹಶಿಕ್ಷಕರು, ಶಾಲಾ ಅಕ್ಷರ ದಾಸೋಹ ಸಿಬ್ಬಂದಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.