19.8 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

ಬೆಳ್ತಂಗಡಿ: ಧರ್ಮಸ್ಥಳ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31ರಂದು ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಉತ್ತರ ಭಾರತದ ನಾಗಾಸಾಧು ಸನ್ಯಾಸಿ ಪರಂಪರೆಯಲ್ಲಿ ಅತ್ಯುನ್ನತ ಹುದ್ದೆಯಾದ ಮಹಾಮಂಡಲೇಶ್ವರ ಪದವಿಯ ಪಟ್ಟಾಭಿಷೇಕವು ಜುನಾ ಅಖಾಡದ ಮೂಲಕ ನೆರವೇರಿತು.

ಇದು ಕರ್ನಾಟಕಕ್ಕೆ ಸಿಕ್ಕಿರುವ ಮೊದಲ ಮಹಾಮಂಡಲೇಶ್ವರ ಪದವಿಯಾಗಿದೆ. ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದವರಿಗೆ ಪದವಿಯನ್ನು ಪ್ರದಾನ ಮಾಡುವುದು ಅಖಾಡದ ವಾಡಿಕೆ. ಈ ಪದವಿಗೆ ಅರ್ಹರಾದವರು ಸ್ವತಂತ್ರ ಪೀಠಾಧೀಶರಾಗಿರಬೇಕಾಗಿದೆ. ಪಟ್ಟಾಭಿಷೇಕಕ್ಕೂ ಮುನ್ನ ಅಖಾಡದಲ್ಲಿರುವ ಕ್ಯಾಬಿನೆಟ್ ಸದಸ್ಯರು ಸ್ವಾಮೀಜಿಯವರ ಆಧ್ಯಾತ್ಮಿಕ ಸತ್ಸಂಗವನ್ನು ಪರಿಶೀಲಿಸಿ ಬೈಠಕ್‌ನಲ್ಲಿ ಚರ್ಚಿಸಿ ಗೌರವ ಪ್ರದಾನ ಮಾಡುವುದಾಗಿದೆ. ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆ ಉಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.

ದಕ್ಷಿಣ ಭಾರತದಲ್ಲಿ ಮಹಾಮಂಡಲೇಶ್ವರ ಪಟ್ಟ ನೀಡಿದ್ದು ವಿರಳ. ಸ್ವಾಮೀಜಿಗಳ ಪೈಕಿ ಕನ್ಯಾಡಿ ಶ್ರೀರಾಮಕ್ಷೇತ್ರದ ಸದ್ಗರು ಶ್ರೀಗಳ ಮೂಲಕ ಕರ್ನಾಟಕಕ್ಕೆ ಬರುವ ಪ್ರಪ್ರಥಮ ಮಹಾಮಂಡಲೇಶ್ವರ ಪದವಿಯಾಗಿದೆ. ಈ ಪಟ್ಟಾಭಿಷೇಕರಾದವರಿಗೆ ಧಾರ್ಮಿಕ ಪುರುಷನಿಗೆ ರಾಷ್ಟ್ರಾದ್ಯಂತ ವಿಶೇಷ ಸೌಲಭ್ಯ ನೀಡಲಾಗುತ್ತದೆ. ವಾರಾಣಸಿಯ ಪಂಚದಶನಾಮ್ ಜುನಾ ಅಖಾಡದಲ್ಲಿರುವ ಸಾಧು ಸಮಾಜದ ಮಹಾಮಂಡಲೇಶ್ವರ ಆಚಾರ್ಯರಾದ ಅವದೇಶಾನಂದ ಗಿರಿ ಮಹಾರಾಜರು ಈ ಪುಣ್ಯ ಕಾರ್ಯದ ಪಟ್ಟಾಭಿಷೇಕವನ್ನು ಶುಕ್ರವಾರ ಮಹಾಕುಂಭಮೇಳದಲ್ಲಿ ನಿರ್ವಹಿಸಿದರು.

ನಂತರ ಮಾತನಾಡಿದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಮಹಾಕುಂಭ ಎಂಬುದು ವಿಶ್ವಕ್ಕೆ ಧಾರ್ಮಿಕ ಪ್ರಜ್ಞೆಯ ದಿಕ್ಸೂಚಿಯಾಗಿತ್ತು. ಐದು ವರ್ಷದ ಮಕ್ಕಳಿಂದ ಹಿಡಿದು 120 ವರ್ಷದ ವೃದ್ಧರವರೆಗೆ ತ್ರಿವೇಣಿ ಸಂಗಮದಲ್ಲಿ ಮುಳುಗಿ ಪಾವನರಾಗಿದ್ದಾರೆ. 12 ವರ್ಷಕ್ಕೊಮ್ಮೆ ನಡೆಯುವ ಕುಂಭಮೇಳದಲ್ಲಿ ಅಮೃತ ಉತ್ಪತ್ತಿಯಾಗುತ್ತದೆ ಎಂಬ ಪ್ರತೀತಿ. ಅದರಲ್ಲೂ 144 ವರ್ಷಕ್ಕೊಮ್ಮೆ ಬರುವ ಈ ಮಹಾಕುಂಭದಲ್ಲಿ ಹಿಮಾಲಯದ ದೊಡ್ಡದೊಡ್ಡ ಸಾಧಕರು ಬಂದು ಆ ನದಿಯ ಪಾವಿತ್ರ್ಯವನ್ನು ಹೆಚ್ಚಿಸುತ್ತಾರೆ. ನಮ್ಮನ್ನ ರಥದ ಮೂಲಕ ಕರೆದೊಯ್ದು ಪುಣ್ಯ ಸ್ನಾನ ಮಾಡಿಸಿದ್ದಾರೆ ಎಂದು ತಿಳಿಸಿದರು.

ಕುಂಭಮೇಳ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಜುನಾ ಅಖಾಡದ ಅಧ್ಯಕ್ಷರಾದ ಹರಿಗಿರಿ ಮಹಾರಾಜ್, ಜುನಾ ಅಖಾಡ ಉಪಾಧ್ಯಕ್ಷರಾದ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಜುನಾ ಅಖಾಡದ ಉತ್ತಾರಾಖಂಡ ಮಹಾಮಂತ್ರಿ ದೇವಾನಂದ ಮಹಾರಾಜ್, ಕೋಶಾಧಿಕಾರಿ ಧೀರಜ್ ಗಿರಿ, ಕನ್ಯಾಡಿ ಶ್ರೀರಾಮ ಕ್ಷೇತ್ರದ ಟ್ರಸ್ಟಿ ತುಕಾರಾಮ್ ಸಾಲ್ಯಾನ್, ಕೃಷ್ಣಪ್ಪ ಗುಡಿರ್ಗಾ, ರವೀಂದ್ರ ಪೂಜಾರಿ ಆರ್ಲ, ಹರ್ಷಿತ್ ಉಪಸ್ಥಿತರಿದ್ದರು.

ಫೆ.2 ರಂದು ಕನ್ಯಾಡಿಗೆ ಆಗಮಿಸಲಿದ್ದು, ಮಾರ್ಚ್ ತಿಂಗಳಲ್ಲಿ ಸಾರ್ವಜನಿಕರಿಂದ ಅಭಿನಂದನಾ ಸಮಾರಂಭ ನಡೆಯಲಿದೆ.

Related posts

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!