ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ, ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.
ಜ.31ರಂದು ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ, ಮಹಾಪೂಜೆ, ಅನ್ನಸಂತರ್ಪಣೆ, ಸಾಯಂಕಾಲ ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಸಾಯಂಕಾಲ ರಂಗಪೂಜೆ ನಡೆಯಿತು. ಇಂದು ಬೆಳಿಗ್ಗೆ ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ, ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ ಮಂತ್ರಾಕ್ಷತೆ ನಡೆಯಲಿದೆ.
ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕೇಸರರಾದ ರಾಜಗೋಪಾಲ ಯಂ. ಪಿ. ಪೆರಾಡೇಲು ಹಾಗೂ ಕುಟುಂಬಸ್ಥರು, ಅಧ್ಯಕ್ಷರಾದ ಗಂಗಾಧರ ಕೆ. ಉಡ್ಯೇರೆ, ಉಪಾಧ್ಯಕ್ಷರಾದ ಪದ್ಮಯ್ಯ ಗೌಡ ಉಡ್ಯೇರೆ, ಕಾರ್ಯದರ್ಶಿ ಕೆ. ಕೃಷ್ಣಪ್ಪ ಕುಲಾಲ್ ಉಡ್ಯೇರೆ, ಅರ್ಚಕರಾದ ರಾಮಕೃಷ್ಣ ರಾವ್ ಮತ್ತು ಅರವಿಂದ ಭಿಡೆ ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.