ಬೆಳ್ತಂಗಡಿ: ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ತಾಲೂಕು ಯುವಜನ ಒಕ್ಕೂಟದ, ಗೌರವ ಅಧ್ಯಕ್ಷ ರಮಾನಂದ ಸಾಲಿಯಾನ್ ಮುಂಡೂರು,
ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಯುವವಾಹಿನಿ ಬೆಳ್ತಂಗಡಿ ಘಟಕದ ನಿಯೋಜಿತ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಧನಂಜಯ್ ರಾವ್, ಹಾಗೂ ಪ್ರವೀಣ್ ಹಳ್ಳಿಮನೆ, ರಜತ್ ಗೌಡ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ ರವರು ಉಪಸ್ಥಿತರಿದ್ದರು.