September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

ಉಜಿರೆ: ಎರಡು ವೈದ್ಯರಿಂದ ಆರಂಭವಾದ ಆಸ್ಪತ್ರೆ ಇಂದು ವಿವಿಧ ಆರೋಗ್ಯ ಕ್ಷೇತ್ರಗಳಲ್ಲಿ ಪರಿಣತಿ ಪಡೆದ 40 ಕ್ಕಿಂತಲೂ ಅಧಿಕ ತಜ್ಞ ವೈದ್ಯರ ಸೇವೆಯನ್ನು ಬೆನಕ ಉಜಿರೆಯಂತಹ ಪರಿಸರದಲ್ಲಿ ಒದಗಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಬದ್ಧತೆಯೊಂದಿಗೆ ಆರಂಭವಾದ ಉಜಿರೆಯ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು ಸಮಾಜದ ಅಗತ್ಯತೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿರುವುದು ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ. ಬೆನಕ ಆಸ್ಪತ್ರೆ ಈ ಪ್ರದೇಶದ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಎಂದು ಸನ್ಮಾನ್ಯ ಯು.ಟಿ.ಖಾದರ್ ತಿಳಿಸಿದರು.


ಕರ್ನಾಟಕ ವಿಧಾನ ಸಭೆಯ ಸಭಾಪತಿಗಳಾದ ಯು.ಟಿ.ಖಾದರ್ ಅವರು ಇತ್ತೀಚೆಗೆ ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಬೇಟಿ ನೀಡಿ ಅಲ್ಲಿನ ವೈದ್ಯಕೀಯ ಸೌಲಭ್ಯಗಳನ್ನು ವೀಕ್ಷಿಸಿ ಮಾತನಾಡುತ್ತಿದ್ದರು. ನಮ್ಮ ಬೆನಕ ಸಂಸ್ಥೆ ಮತ್ತು ಯು.ಟಿ.ಖಾದರ್ ಅವರಿಗೆ ಅವಿನಾಭಾವ ಸಂಬಂಧ. ಕರ್ನಾಟಕ ಸರಕಾರದ ಆರೋಗ್ಯ ಸಚಿವರಾಗಿದ್ದಾಗ ಯು.ಟಿ.ಖಾದರ್ ಅವರು ಬೆನಕ ಆಸ್ಪತ್ರೆಗೆ ಬಂದು ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಕೊಠಡಿ ಯನ್ನು ಉದ್ಘಾಟನೆ ಮಾಡಿದ್ದು ಪಟ್ಟಣಗಳ ದೊಡ್ಡ ಆಸ್ಪತ್ರೆಗಳಿಗೆ ಸೀಮಿತವಾದ ಮೈಕ್ರೊಸರ್ಜರಿ, ಕೀಹೋಲ್ ಸರ್ಜರಿ , ಕಣ್ಣಿನ ಸರ್ಜರಿ ಮೊದಲಾದ ಸಂಕೀರ್ಣ ಶಸ್ತ್ರಚಿಕಿತ್ಸೆಗಳಿಗೆ ನಮ್ಮ ಬೆನಕ ಆಸ್ಪತ್ರೆ ಗುರುತಿಸಲ್ಪಟ್ಟು ದೂರದೂರಿನಿಂದ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿರುವುದು ಹೆಮ್ಮೆಯ ಸಂಗತಿ. ಬೆನಕ ಆಸ್ಪತ್ರೆಯ ಹೆಮ್ಮೆಯ ರಜತ ಸಂಭ್ರಮದ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಸಭಾಪತಿಗಳಾದ ಯು.ಟಿ.ಖಾದರ್ ಅವರು ಬೆನಕ ಆಸ್ಪತ್ರೆಗೆ ಆಗಮಿಸಿದ್ದು ನಮಗೆಲ್ಲಾ ಸಂತೋಷ ಹಾಗೂ ಸಾರ್ಥಕ್ಯದ ಕ್ಷಣ ಎಂದು ಬೆನಕ ಆಸ್ಪತ್ರೆಯ ವೈದ್ಯಕೀಯ ನರ‍್ದೇಶಕ ಡಾ. ಗೋಪಾಲಕೃಷ್ಣ ಸ್ವಾಗತಿಸುತ್ತಾ ತಿಳಿಸಿದರು.


ಆಸ್ಪತ್ರೆಯ ಪರವಾಗಿ ಯು.ಟಿ.ಖಾದರ್ ಅವರಿಗೆ ಡಾ. ಗೋಪಾಲಕೃಷ್ಣ, ಡಾ.ಆದಿತ್ಯ ರಾವ್ ಹಾಗೂ ಡಾ.ಅಂಕಿತಾ ಅವರು ಗೌರವರ್ಪಣೆ ಸಲ್ಲಿಸಿದರು. ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದ ಕಾರ‍್ಯಕ್ರಮನ್ನು ಆಸ್ಪತ್ರೆಯ ಸಾರ್ವಜನಿಕ ಸಂರ್ಪಕಾಧಿಕಾರಿ ಎಸ್.ಜಿ.ಭಟ್ ನಿರ್ವಹಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೇವಸ್ಯ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya
error: Content is protected !!