ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಡ: ನಡ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ಫೆ.3 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಜಯ ಶೆಟ್ಟಿ, ಕಾರ್ಯದರ್ಶಿ ಕಿರಣ್ ಎಂ., ಪಂಚಾಯತ್‌ ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ. ಸ್ವಾಗತಿಸಿದರು. ಪಂ. ಕಾರ್ಯದರ್ಶಿ ಕಿರಣ್ ಎಂ ಅನುಪಾಲನ ವರದಿ ಹಾಗೂ ವಾರ್ಡು ಸಭೆಯ ವಿವರ ನೀಡಿದರು. ಗುಮಾಸ್ತೆ ಭಾರತಿ ಜಮಾ-ಖರ್ಚು ವರದಿ ಬಗ್ಗೆ ವಿವರಿಸಿದರು.

Related posts

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya
error: Content is protected !!