34.3 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

ಬೆಳ್ತಂಗಡಿ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಫೆ.2 ರಂದು ಸಂಜೆ ಅಳದಂಗಡಿ ಪಿಲ್ಯ ಸಮೀಪ ನಡೆದಿದೆ.

ಉಡುಪಿ ಕಡೆಯಿಂದ ಬರುತಿದ್ದ ಕಾರು ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಪಿಲ್ಯ ಸಮೀಪದ ಗೋಳಿ ಕಟ್ಟೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಅಪಘಾತ ನಡೆದಿದೆ.

ಅಪಘಾತದ ರಭಸಕ್ಕೆ ಇಕೋ ಕಾರಿನಲ್ಲಿದ್ದ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡವರನ್ನುಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಕಾರಿನಲ್ಲಿದ್ದವರ ಮಾಹಿತಿ ತಿಳಿದು ಬರಬೇಕಾಗಿದೆ.

Related posts

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಆರಂಬೋಡಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: 500ಕ್ಕಿಂತ ಹೆಚ್ಚು ಜನರು ವಿವಿಧ ರೀತಿಯ ಆರೋಗ್ಯ ತಪಾಸಣೆ ಮಾಡಿದ್ದು ವಿಶೇಷವಾಗಿತ್ತು

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!