34.3 C
ಪುತ್ತೂರು, ಬೆಳ್ತಂಗಡಿ
February 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಯವಾದಿ ಭಗೀರಥ ಜಿ. ರವರ ನೋಟರಿ ಕಚೇರಿ ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಛೇರಿಯು ಬೆಳ್ತಂಗಡಿ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಫೆ.3 ರಂದು ಉದ್ಘಾಟನೆಗೊಂಡಿತು.

ಕಛೇರಿಯನ್ನು ಶ್ರೀ ಕ್ಷೇತ್ರ ಮೇಲಂತಬೆಟ್ಟು ಧರ್ಮದರ್ಶಿ ಯೋಗೀಶ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ನ್ಯಾಯವಾದಿ ಬಿ ಕೆ ಧನಂಜಯ ರಾವ್, ಪೆರಾಡಿ ಸಿ. ಎ ಬ್ಯಾಂಕಿನ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಮೇಲಂತಬೆಟ್ಟು ಧರ್ಮದರ್ಶಿ ಯೋಗೀಶ್ ಪೂಜಾರಿ, ಗುರುದೇವ ಬ್ಯಾಂಕಿನ ಮ್ಯಾನೇಜರ್ ಅಶ್ವತ್ , ವಿಶೇಷ ಅಧಿಕಾರಿ ಮೋನಪ್ಪ ಪೂಜಾರಿ ಕಂಡೆತ್ಯಾರು, ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್, ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ, ಪೆರಾಡಿ ಸಿಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಕ್ ಲತೀಫ್, ಅಪರ ಸರ್ಕಾರಿ ವಕೀಲ ಮನೋಹರ್ ಕುಮಾರ್ ಇಲಂತಿಲ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ದಂತ ವೈದ್ಯ ಡಾ| ರಾಜಾರಾಮ ಕೆ ಬಿ, ಚಿದಾನಂದ ಎಲ್ಡಕ್ಕ, ಹರಿದಾಸ ಕೇದೆ, ಚಿದಾನಂದ ಇಡ್ಯಾ, ವಸಂತ ಶೆಟ್ಟಿ ಶ್ರದ್ಧಾ, ಪ.ಪಂ. ಸಂಯೋಜಕ ಜಯಾನಂದ ಲಾಯಿಲ, ರಮೇಶ್ ಪೂಜಾರಿ ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಭಗೀರಥ ಜಿ, ಸುಕನ್ಯಾ ಭಗೀರಥ, ಸುಜನ್, ಸುಧೀಕ್ಷಾ ಸ್ವಾಗತಿಸಿ, ಸತ್ಕರಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!