ಸುಲ್ಕೇರಿ : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.1 ರಿಂದ ಮಾ. 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಸುಲ್ಕೇರಿ ಶ್ರೀ ಗುರು ನಾರಾಯಣ ಸೇವಾ ಸಂಘ ಇಲ್ಲಿ ಗೆಜ್ಜೆಗಿರಿಯ ಭಕ್ತಾಭಿಮಾನಿಗಳ ಸಮಾಲೋಚನ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘ ಅಧ್ಯಕ್ಷ ಕೊರಗಪ್ಪ ಪೂಜಾರಿ ಮಣಿಕಂಠರು ಇವರು ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ದರು.
ಶ್ರೀ ಕ್ಷೇತ್ರ ಗೆಜ್ಜಗಿರಿ ಜಾತ್ರೆೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ರವರು ಶ್ರೀ ಕ್ಷೇತ್ರದಲ್ಲಿ ನಡೆಯುವ ಮಡಿಲು ಸೇವೆ ಹಾಗೂ ಉತ್ಸವದ ಮಾಹಿತಿಯನ್ನು ಸಭೆಗೆ ನೀಡಿ ತಾಲೂಕಿನ ಎಲ್ಲಾ ಭಕ್ತಾಭಿಮಾನಿಗಳನ್ನು ಜಾತ್ರೋತ್ಸವಕ್ಕೆ ಆಮಂತ್ರಿಸಿದರು.
ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸೇವಾ ಸಂಘ ಸುಲ್ಕೇರಿ ಇದರ ಗೌರವಾಧ್ಯಕ್ಷ ಸುಧೀರ್ ಎಸ್ ಪಿ, ಗುತ್ತು ಬರ್ಕೆಯವರಾದ ನಾರಾಯಣ ಪೂಜಾರಿ ಬೋಳುವಾಲು, ಆನಂದ ಪೂಜಾರಿ ಕುತ್ಯಾರು , ಉಪಸ್ಥಿತರಿದ್ದರು.
ಶ್ರೀ ಮಹಾಮಾಯಿ ದೇವಸ್ಥಾನದ ಮಾಜಿ ಆಡಳಿತ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿ ಕುತ್ಯಾರು ಯೋಗಿಶ್ ಪೂಜಾರಿ ಬೋಳುವಾಲು ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಹಲವಾರು ಭಕ್ತಾಭಿಮಾನಿಗಳು ಸಭೆಯಲ್ಲಿ ಸೇರಿದ್ದರು.
ಶ್ರೀ ಗುರುನಾಥ್ ಸೇವಾ ಸಂಘ ಸುಲ್ಕೇರಿಯ ಪ್ರಧಾನ ಕಾರ್ಯದರ್ಶಿಯಾದ ಡೀಕಯ್ಯ ಪೂಜಾರಿಯವರು ಕಾರ್ಯಕ್ರಮವನ್ನು ನಿರ್ವಹಿಸಿ, ಧನ್ಯವಾದವನ್ನಿತ್ತರು.