ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿತ್ತಬಾಗಿಲು ಬ್ರಾಂಚ್ ಸಮಿತಿ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಮಿತ್ತಬಾಗಿಲು ಗ್ರಾಮದ ಪೆರ್ದಾಡಿಯಲ್ಲಿ ನಿರ್ಮಿಸಿದ ಮನೆಯನ್ನು ಬಡ ಮಹಿಳೆ ರಹಮತ್ ಪೆರ್ದಾಡಿ ಅವರಿಗೆ ಹಸ್ತಾಂತರ ಮಾಡಲಾಯಿತು.
ಅಸ್ಸಯ್ಯದ್ ಝೈನುಲ್ ಆಬಿದೀನ್ ಜಮಾಲುಲ್ಲೈಲಿ ತಂಙಳ್ ಕಾಜೂರು ಅವರು ದುವಾ ಆಶಿರ್ವಾದಗೈದರು. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಮನೆ ಕೀ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಿದರು.
ಮನೆ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿದ ನಿಜಾಮ್ ಗೇರುಕಟ್ಟೆ, ಪಂಚಾಯತ್ ಸದಸ್ಯರಾದ ಅಹ್ಮದ್ ಕಬೀರ್ ಹಾಗೂ ಮುಸ್ತಾಫ ಜಿ. ಕೆರೆ ಇವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಪೆರ್ದಾಡಿ ಖತೀಬರಾದ ಶರೀಫ್ ಸಹದಿ, ಕಿಲ್ಲೂರು ಜುಮ್ಮಾ ಮಸೀದಿ ಅಧ್ಯಕ್ಷರಾದ ಅಝೀಝ್ ಝುಹ್ರಿ ಉಸ್ತಾದ್, ರಫೀಕ್ ಕನ್ನಡಿ ಕಟ್ಟೆ, ಅಶ್ರಫ್ ಕಾಜೂರು, ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ಹಾಗೂ ಜಮಾತ್ ಬಾಂಧವರು ಉಪಸ್ಥಿತರಿದ್ದರು.