24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಫೆ.3 ರಂದು ನಡೆಸಲಾಯಿತು.


ರಾಜ್ಯ ಪ್ರಶಸ್ತಿ ವಿಜೇತ ಮುಖ್ಯ ಶಿಕ್ಷಕರಾದ ಬಿ ಸೋಮಶೇಖರ್ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, “ಮಕ್ಕಳನ್ನು ಸಂಸ್ಕೃತ ನಾಗರಿಕರನ್ನಾಗಿಸುವಲ್ಲಿ ಪೋಷಕರ ಪಾತ್ರ ಹಿರಿದಾಗಿದೆ” ಎಂದರು.


“ವಿದ್ಯಾರ್ಥಿಗಳ ಸಾಧನೆಗೆ ಅಸಾಧ್ಯವಾದದ್ದು ಯಾವುದು ಇಲ್ಲ. ಚಿಂತೆ ಬೇಡ ಚಿಂತನೆ ಅಗತ್ಯ, ನಿರಂತರ ಅಧ್ಯಯನ ಯಶಸ್ಸಿನ ಗುಟ್ಟು ” ಎಂಬ ಮಾತುಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದರು.


“ಮಗುವಿನ ಕಲಿಕೆಗೆ ಮಾಧ್ಯಮ ಮುಖ್ಯವಲ್ಲ ಮನಸ್ಸು ಮುಖ್ಯ. ಏಕಾಗ್ರತೆ ಶ್ರದ್ಧೆ, ನಂಬಿಕೆ ಮತ್ತು ಛಲದಿಂದ ಅಭ್ಯಾಸ ಮಾಡಿದರೆ ಉತ್ತಮ ಅಂಕ ಗಳಿಸಲು ಸಾಧ್ಯ” ಎಂದರು.


ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಗಪೂರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿಯಾದ ಜಯಶ್ರೀ ಜೈನ್ ಅಧ್ಯಕ್ಷತೆ ವಹಿಸಿದ್ದರು. 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಇದ್ದರು. ಶಿಕ್ಷಕಿ ಶ್ವೇತಾ ಸ್ವಾಗತಿಸಿ, ಶಿಕ್ಷಕಿ ದಿವ್ಯ ರವರು ನಿರೂಪಿಸಿ, ವಂದಿಸಿದರು.

Related posts

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಧರ್ಮಸ್ಥಳದಲ್ಲಿ ಪುರಾಣ ಪ್ರವಚನ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!