February 4, 2025
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.3ರಂದು ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಗೇರುಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಎನ್‌ಎಸ್‌ಎಸ್‌ನ ಧ್ಯೇಯ, ಉದ್ದೇಶ ಹಾಗೂ ಶಿಬಿರದ ಮಹತ್ವದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರಿ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ, ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ನಿವೃತ್ತ ಉಪಪ್ರಾಂಶುಪಾಲರು ದಿವಾಕರ ಆಚಾರ್ಯ, ಗೇರುಕಟ್ಟೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಎಂ., ವೈದ್ಯರು ಡಾ. ಅನಂತ ಭಟ್ ಗೇರುಕಟ್ಟೆ, ಗೇರುಕಟ್ಟೆಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆ ಉಪಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ, ಶ್ರೀಮತಿ ಪ್ರೇಮ ಶೆಟ್ಟಿ, ಗೇರುಕಟ್ಟೆ ಎನ್‌ಎಸ್‌ಎಸ್‌ನ ಯೋಜನಾಧಿಕಾರಿ ಪ್ರಕಾಶ್ ಗೌಡ, ಉಪಯೋಜನಾಧಿಕಾರಿ ಲೋಹಿತ್ ಮತ್ತು ಶ್ರೀಮತಿ ಪುಷ್ಪಲತಾ ಪಿ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ಗೇರುಕಟ್ಟೆ ಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya
error: Content is protected !!