September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಾರದಾ ರವರ ಅಧ್ಯಕ್ಷತೆಯಲ್ಲಿ ಫೆ.4 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೀಲು, ಪಂಚಾಯತ್‌ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ. ಸ್ವಾಗತಿಸಿದರು. ಕಾರ್ಯದರ್ಶಿ ಕುಂಞ ಕೆ. ಅನುಪಾಲನ ವರದಿ ವಾಚಿಸಿದರು.

Related posts

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ: ಫೆ.18: ನಾಳೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ ಶಾಸಕ ಹರೀಶ್‌ಪೂಂಜ ಭಾಗಿ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!