ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವವು ಜ.31ರಿಂದ ಫೆ.4ರವರೆಗೆ ವೇ.ಮೂ. ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು.
ಸ್ವಸ್ತಿ ಪುಣ್ಯಾಹ ವಾಚನ, ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ, ತೋರಣ ಮುಹೂರ್ತ ಗಣಪತಿ ಹವನ, ನವಕ ಕಲಶ, ಮಹಾಪೂಜೆ, ನಿತ್ಯ ಬಲಿ, ಧ್ವಜಾರೋಹಣ, ಶ್ರೀ ರಂಗಪೂಜೆ, ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ವೇ.ಮೂ. ಶಶಾಂಕ ಭಟ್ ಬಳಂಜ ಇವರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ವಿಷ್ಣುಮೂರ್ತಿ ದೇವರ ಮಹಾಪೂಜೆ, ನಿತ್ಯ ಬಲಿ, ಸಂಜೆ ಶ್ರೀ ರಂಗಪೂಜೆ, ಬಲಿ. ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ಕ್ಷೇತ್ರದ ದೈವಗಳಾದ ಕೊಡಮಣಿತ್ತಾಯ, ಮೂಜಿಲ್ನಾಯ, ಕಲ್ಕುಡ-ಕಲ್ಲುರ್ಟಿ ನೇಮೋತ್ಸವ ನಡೆಯಿತು.
ನಾಗದೇವರ ಸನ್ನಿಧಿಯಲ್ಲಿ ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ, ಆಶ್ಲೇಷಾ ಬಲಿ, ಸಂಜೆ ಶ್ರೀರಂಗ ಪೂಜೆ, ಬಲಿ, ವಸಂತಕಟ್ಟೆ ಪೂಜೆ, ಹಾಗೂ ರಾತ್ರಿ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ದರ್ಶನ ಬಲಿ, ಬಟ್ಟಲು ಕಾಣಿಕೆ, ಸಂಜೆ ಶ್ರೀ ರಂಗಪೂಜೆ, ಬಲಿ, ವಸಂತಕಟ್ಟೆ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಶ್ರೀ ಭೂತ ಬಲಿ, ಶಯನ ಪೂಜೆ, ಕವಾಟ ಬಂಧನ, ಅನ್ನಸಂತರ್ಪಣೆ.
ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಕೃಷ್ಣ ಸಂಪಿಗೆತ್ತಾಯ ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರೈ ಕಾರಂದೂರು ,ಕಾರ್ಯದರ್ಶಿ ವಿದ್ಯಾನಂದ ಹಾಗೂ ಸಮಿತಿಯ ಸದಸ್ಯರು ಊರವರು, ಭಕ್ತರು ಉಪಸ್ಥಿತರಿದ್ದರು.