ಉಜಿರೆ: ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.3ರಂದು ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಗೇರುಕಟ್ಟೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಎನ್‌ಎಸ್‌ಎಸ್‌ನ ಧ್ಯೇಯ, ಉದ್ದೇಶ ಹಾಗೂ ಶಿಬಿರದ ಮಹತ್ವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಪ್ರಭಾರಿ ಪ್ರಾಂಶುಪಾಲರು ಅಮರೇಶ್ ಹೆಬ್ಬಾರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೇದಿನ, ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ನಿವೃತ್ತ ಉಪಪ್ರಾಂಶುಪಾಲರು ದಿವಾಕರ ಆಚಾರ್ಯ, ಗೇರುಕಟ್ಟೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಎಂ., ವೈದ್ಯರು ಡಾ. ಅನಂತ ಭಟ್ ಗೇರುಕಟ್ಟೆ, ಗೇರುಕಟ್ಟೆಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆ ಉಪಪ್ರಾಂಶುಪಾಲರು ಶ್ರೀಮತಿ ಈಶ್ವರಿ ಕೆ, ಗೇರುಕಟ್ಟೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ, ಶ್ರೀಮತಿ ಪ್ರೇಮ ಶೆಟ್ಟಿ, ಗೇರುಕಟ್ಟೆ ಎನ್‌ಎಸ್‌ಎಸ್‌ನ ಯೋಜನಾಧಿಕಾರಿ ಪ್ರಕಾಶ್ ಗೌಡ, ಉಪಯೋಜನಾಧಿಕಾರಿ ಲೋಹಿತ್ ಮತ್ತು ಶ್ರೀಮತಿ ಪುಷ್ಪಲತಾ ಪಿ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸರಕಾರಿ ಪ.ಪೂ. ಕಾಲೇಜು, ಪ್ರೌಢಶಾಲೆ, ಗೇರುಕಟ್ಟೆ ಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಶಿಬಿರಾರ್ಥಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಭಾಗವಹಿಸಿದ್ದರು.