September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಗ್ರಾಮಪಂಚಾಯತಿ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಫೆ.3 ರಂದು ಜರಗಿತು.

ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಸಭೆ ಕರೆದ ಉದ್ದೇಶಗಳನ್ನು ತಿಳಿಸಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದರು.
ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳ ಸಲಹೆ ನೀಡಿದರು.


ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರಾದ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು. ಪಂಚಾಯತಿ ಸಿಬ್ಬಂದಿ ಸಹಕರಿಸಿದರು.ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.

Related posts

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya
error: Content is protected !!