ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಫೆ.3 ರಂದು ನಡೆಸಲಾಯಿತು.
ರಾಜ್ಯ ಪ್ರಶಸ್ತಿ ವಿಜೇತ ಮುಖ್ಯ ಶಿಕ್ಷಕರಾದ ಬಿ ಸೋಮಶೇಖರ್ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, “ಮಕ್ಕಳನ್ನು ಸಂಸ್ಕೃತ ನಾಗರಿಕರನ್ನಾಗಿಸುವಲ್ಲಿ ಪೋಷಕರ ಪಾತ್ರ ಹಿರಿದಾಗಿದೆ” ಎಂದರು.
“ವಿದ್ಯಾರ್ಥಿಗಳ ಸಾಧನೆಗೆ ಅಸಾಧ್ಯವಾದದ್ದು ಯಾವುದು ಇಲ್ಲ. ಚಿಂತೆ ಬೇಡ ಚಿಂತನೆ ಅಗತ್ಯ, ನಿರಂತರ ಅಧ್ಯಯನ ಯಶಸ್ಸಿನ ಗುಟ್ಟು ” ಎಂಬ ಮಾತುಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿದರು.
“ಮಗುವಿನ ಕಲಿಕೆಗೆ ಮಾಧ್ಯಮ ಮುಖ್ಯವಲ್ಲ ಮನಸ್ಸು ಮುಖ್ಯ. ಏಕಾಗ್ರತೆ ಶ್ರದ್ಧೆ, ನಂಬಿಕೆ ಮತ್ತು ಛಲದಿಂದ ಅಭ್ಯಾಸ ಮಾಡಿದರೆ ಉತ್ತಮ ಅಂಕ ಗಳಿಸಲು ಸಾಧ್ಯ” ಎಂದರು.
ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಗಪೂರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿಯಾದ ಜಯಶ್ರೀ ಜೈನ್ ಅಧ್ಯಕ್ಷತೆ ವಹಿಸಿದ್ದರು. 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ಇದ್ದರು. ಶಿಕ್ಷಕಿ ಶ್ವೇತಾ ಸ್ವಾಗತಿಸಿ, ಶಿಕ್ಷಕಿ ದಿವ್ಯ ರವರು ನಿರೂಪಿಸಿ, ವಂದಿಸಿದರು.