37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ಸಾಮಾಜಿಕ ಬದ್ಧತೆಯ ಅಂಗವಾಗಿ ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ(ರಿ) ಮತ್ತು ಪಡಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಮೃದ್ಧಿ ಸಭಾಭವನ ದಲ್ಲಿ ಉಚಿತ ಆರೋಗ್ಯ ಶಿಬಿರವು ಫೆ.8 ನಡೆಯಲಿದೆ.


ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಲಿದ್ದಾರೆ.


ಬೆಳಿಗ್ಗೆ9.30 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರಾದ ಡಾ. ಆದಿತ್ಯ ರಾವ್, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆಯಾಗಿರುವ ಡಾ.ಅಂಕಿತಾ ಜಿ,ಭಟ್, ಎಲುಬು ಮತ್ತು ಕೀಲು ತಜ್ಞರಾಗಿರುವ ಡಾ.ರೋಹಿತ್.ಜಿ.ಭಟ್ ಹಾಗೂ ಮಕ್ಕಳ ತಜ್ಞರಾದ ಡಾ.ಗೋವಿಂದ್ ಕಿಶೋರ್ ಅವರ ಸೇವೆ ಲಭ್ಯವಿದೆ.


ವಿಶೇಷವಾಗಿ ಈ ಶಿಬಿರದಲ್ಲಿ ಉಚಿತ ಇ.ಸಿ.ಜಿ, ರಕ್ತದೊತ್ತಡ, ಮಧುಮೇಹ ತಪಾಸಣೆ ಹಾಗೂ ಅಗತ್ಯ ಔಷಧ ವಿತರಣೆ ಇರಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆಂತೋನಿ ಫೆರ್ನಾಂಡಿಸ್, ಉಪಾಧ್ಯಕ್ಷ ನರೇಂದ್ರ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ, ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ, ಸದಸ್ಯ ಸಂತೋಷ್ ಕುಮಾರ್ ಜೈನ್, ಪಡಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಬ್ರಮಣ್ಯ ಭಟ್, ಕಾರ್ಯದರ್ಶಿ ಶ್ರೀಮತಿ ಮೇಬಲ್ ಕ್ರಾಸ್ತಾ ಮೊದಲಾದವರ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Related posts

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ : ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!