![](https://suddiudaya.com/wp-content/uploads/2025/02/1001654160-1-1024x576.jpg)
ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಕ್ಕಡ ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಬಿಜೆಪಿ ಸಹಕಾರ ಭಾರತೀಯ ಕಾರ್ಯಕರ್ತ ಬಂಧುಗಳಿಗೆ, ಅಮೂಲ್ಯ ಮತ ನೀಡಿ ಆಶೀರ್ವದಿಸಿದ ಮತದಾರರಿಗೆ, ವಿಜಯಪತಾಕೆ ಹಾರಿಸಿದ ಸ್ಪರ್ಧಿಗಳಿಗೆ ಅಭಿನಂದನಾ ಕಾರ್ಯಕ್ರಮ ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಫೆ. 5ರಂದು ಜರಗಿತು.
![](https://suddiudaya.com/wp-content/uploads/2025/02/1001654154-1-1024x576.jpg)
ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಕೊಕ್ಕಡ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ ಪೂವಾಜೆ, ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮನೋಜ್ ಉಪಸ್ಥಿತರಿದ್ದರು.
![](https://suddiudaya.com/wp-content/uploads/2025/02/1001654163-1-1024x576.jpg)
![](https://suddiudaya.com/wp-content/uploads/2025/02/1001654157-1-1024x576.jpg)
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಸಹಕಾರಿ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸ್ಪರ್ಧಿಗಳನ್ನು ವಿಧಾನ ಪರಿಷತ್ ಶಾಸಕರಾದ ಕೆ. ಪ್ರತಾಪ್ ಸಿಂಹ ನಾಯಕ್ ಹೂ ನೀಡುವುದರ ಮೂಲಕ ಪಕ್ಷದ ವತಿಯಿಂದ ಅಭಿನಂದಿಸಲಾಯಿತು. ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಮನೋಜ್ ಸ್ವಾಗತಿಸಿದರು. ಕೊಕ್ಕಡ ಗ್ರಾ. ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ ಕಾರ್ಯಕ್ರಮ ನಿರೂಪಿಸಿದರು. ಗ್ರಾ. ಪಂ. ಮಾಜಿ ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್ ವಂದಿಸಿದರು.