22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್, ಉಜಿರೆ ಇಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅಗತ್ಯತೆಗಳನ್ನು ತಿಳಿಸಿ ಕೊಡುವ ಉದ್ದೇಶದಿಂದ ಆಯೋಜನೆ ಮಾಡಿದ ತಾಂತ್ರಿಕ ಶಿಕ್ಷಣ ಕಾರ್ಯಾಗಾರ ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮ ಗಣ್ಯ ಅತಿಥಿಗಳು ಹಾಗೂ ಉಪನ್ಯಾಸಕರ ಉಪಸ್ಥಿತಿಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ತಾರಕೇಸರಿ ಉದ್ಘಾಟಿಸಿ ಮಾತಾಡಿದ ತಾಂತ್ರಿಕ ಶಿಕ್ಷಣದ ಮಹತ್ವ ಮತ್ತು ಅವಕಾಶಗಳು ಎಲ್ಲ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಈ ಕಾರ್ಯಾಗಾರದ ಉದ್ದೇಶ ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ವಿಶೇಷ ಕಾರ್ಯಾಗಾರದ ಸಂಪನ್ಯೂಲ ವ್ಯಕ್ತಿಯಾಗಿ ಆಗಮಿಸಿದ ಜೇಸಿಐ ಭಾರತದ ರಾಷ್ಟ್ರೀಯ ತರಬೇತುದಾರ ಸತೀಶ್ ಭಟ್ ಬಿಳಿನೆಲೆ ಅವರು ತಾಂತ್ರಿಕ ಶಿಕ್ಷಣದ ಪ್ರಾಮುಖ್ಯತೆ ಹಾಗೂ ಆಧುನಿಕ ಯುಗದಲ್ಲಿ ಅದರ ಅವಶ್ಯಕತೆ ಬಗ್ಗೆ ಪ್ರಭಾವಶಾಲಿ ತರಬೇತಿ ನೀಡಿದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಅಮರೇಶ್ ಹೆಬ್ಬಾರ್ ವಹಿಸಿದ್ದರು. ವೇದಿಕೆಯ ಮೇಲೆ ಕಾರ್ಯಾಗಾರದ ಸಂಯೋಜಕ ಮಿಥುನ್ ಕುಮಾರ್ ಬಿ ಉಪಸ್ಥಿತರಿದ್ದರು. ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ್ ಶೆಟ್ಟಿ ಹಾಗೂ ಕಾಲೇಜಿನ ಮ್ಯಾನೇಜರ್ ಚಂದ್ರನಾಥ್ ಜೈನ್ ಮತ್ತು ಕಾಲೇಜಿನ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಕಾಲೇಜಿನ ಉಪನ್ಯಾಸಕ ಸಂಪತ್ ಕುಮಾರ್ ನಿರೂಪಿಸಿ, ಉಪನ್ಯಾಸಕ ಶಿವರಾಜ್ ವಂದಿಸಿದರು.

ಒಂದು ದಿನದ ಈ ವಿಶೇಷ ಕಾರ್ಯಾಗಾರದಲ್ಲಿ ಸತೀಶ್ ಭಟ್ ಅವರಿಂದ ತಾಂತ್ರಿಕ ಶಿಕ್ಷಣದ ಮಹತ್ವದ ಕುರಿತು ವಿಸ್ತೃತ ಮಾಹಿತಿ, ನಂತರ ಗೂಗಲ್ ಡ್ರೈವ್ ವೈಶಿಷ್ಟ್ಯಗಳು ಮತ್ತು ಉಪಯೋಗಗಳು – ಅಮರನಾಥ್ ಹೆಬ್ಬಾರ್, ಸಹಾಯಕ ಉಪನ್ಯಾಸಕರು, ಎಸ್.ಡಿ.ಎಮ್ ಪಾಲಿಟೆಕ್ನಿಕ್ ಮತ್ತು ವರದರಾಜ್ ಬಲ್ಲಾಳ್ ಇವರಿಂದ ಮಾಹಿತಿ.
ನಂತರ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ– ಸಂಪತ್ ಕುಮಾರ್, ಉಪನ್ಯಾಸಕರು, ಎಸ್.ಡಿ.ಎಮ್ ಪಾಲಿಟೆಕ್ನಿಕ್, ಉಜಿರೆ, ಅವರು ವಿದ್ಯಾರ್ಥಿಗಳಿಗೆ ಭವಿಷ್ಯದ ವೃತ್ತಿ ಯೋಜನೆ ಬಗ್ಗೆ ಮಾರ್ಗದರ್ಶನ ನೀಡಿದರು.

ಈ ಕಾರ್ಯಾಗಾರದಲ್ಲಿ ಬೆಳ್ತಂಗಡಿ ತಾಲೂಕಿನ 40ಕ್ಕೂ ಹೆಚ್ಚಿನ ಪ್ರೌಢ ಶಾಲಾ ಶಿಕ್ಷಕರು ಭಾಗವಹಿಸಿ ಸಾರ್ಥಕ ಪ್ರಯೋಜನ ಪಡೆದುಕೊಂಡರು.

Related posts

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆ :ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾ ಕೂಟ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya
error: Content is protected !!