ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆಯು ಸರಕಾರಿ ಪ್ರೌಢ ಶಾಲೆ ಪದ್ಮುಂಜ ಇಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ಜಸ್ಮಿತ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ಇದರ ಆರೋಗ್ಯ ಅಧಿಕಾರಿ ಪ್ರಶಾಂತ್ ಆರ್.ಕೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಮನ ಯೆಸ್, ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಮತಿ, ಶಾಲಾ ಅಧ್ಯಕ್ಷ ಪುರುಷೋತ್ತಮ ಗೌಡ, ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಅಧಿಕಾರಿ ಅಶ್ವಿನಿ, ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಉಮಾವತಿ, ಶ್ರೀ ಮತಿ ಸುಮತಿ ಗೌಡ, ಶ್ರೀಮತಿ ಗಾಯತ್ರಿ ಮತ್ತು ಅಮಿತ್ ಕುಮಾರ್, ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಮೇಶ ನಾಯ್ಕ ಸ್ವಾಗತಿಸಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ರಮೇಶ್ ಗೌಡ ಧನ್ಯವಾದವಿತ್ತರು.