April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

ಬೆಳ್ತಂಗಡಿ : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ (ಗುಜರಿ) ಕಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿ ಲಾರಿಯನ್ನು ಬೆಳ್ತಂಗಡಿ ಪೊಲೀಸ್ ವಶಕ್ಕೆ ನೀಡಿದ್ದರು. ಬಳಿಕ ಕಬ್ಬಿಣದ ವಸ್ತುವಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

KA-25-AB-2169 ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಬೆಳ್ತಂಗಡಿ ಚರ್ಚ್ ರೋಡ್ ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗಿಸುತ್ತಿದ್ದಾಗ ಜ.27 ರಂದು ರಾತ್ರಿ ಸುಮಾರು 7 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ಲಾಯಿಲ ಹೆದ್ದಾರಿಯ ರಸ್ತೆಯಲ್ಲಿ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ಸರಿಯಾದ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದ್ದು. ನಂತರ ಲಾರಿಯನ್ನು ಚಾಲಕ ಹುಬ್ಬಳಿ ಮೂಲದ ವೀರಭದ್ರ ರನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ವಶಕ್ಕೆ ನೀಡಿ ನೋಟಿಸ್ ನೀಡಿದ್ದರು.

ಕಬ್ಬಿಣ ಸಾಗಿಸುವ ಮಾಲೀಕ ಮಂಗಳೂರು ವಾಣಿಜ್ಯ ಇಲಾಖೆ ಕಚೇರಿಗೆ ಫೆ.3 ರಂದು ಬಂದು ಅಸಮರ್ಪಕ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು ಅದರಂತೆ ಅಧಿಕಾರಿಗಳು ದಂಡ ವಿಧಿಸಿ ಫೆ.4 ರಂದು ಲಾರಿಯನ್ನು ಮತ್ತು ಕಬ್ಬಿಣದ ವಸ್ತುಗಳನ್ನು ಬಿಡುಗಡೆ ಮಾಡಿದ್ದಾರೆ.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya
error: Content is protected !!