19.9 C
ಪುತ್ತೂರು, ಬೆಳ್ತಂಗಡಿ
February 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.

ಇವರು ಡಾ. ಎ. ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ ರುಡ್ಸೆಟಿಯನ್ನು ಅನುಲಕ್ಷಿಸಿ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್. ಡಿ. ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ, ಬಿವೋಕ್ ವಿಭಾಗದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ದಿವ ಕೊಕ್ಕಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!